Download Our App

Follow us

Home » ರಾಜ್ಯ » ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ..!

ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ..!

ಬೆಂಗಳೂರು : ಇಂದಿನಿಂದ 2023-24ನೇ ಸಾಲಿನ ದ್ವಿತೀಯ PUC ಪರೀಕ್ಷೆ ಆರಂಭವಾಗಲಿದೆ. ರಾಜ್ಯಾದ್ಯಂತ 1124 ಪರೀಕ್ಷಾ ಕೇಂದ್ರಗಳಲ್ಲಿ 6,98,624 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಇಂದಿನಿಂದ ಮಾ.22 ರ ವರೆಗೆ ಬೆಳಗ್ಗೆ 10.30ರಿಂದ ಮಧ್ಯಾಹ್ನ 01.30 ರವರಗೆ ಪರೀಕ್ಷೆಗಳು ನಡೆಯಲಿವೆ. ಇಂದು ಕನ್ನಡ ಮತ್ತು ಅರೇಬಿಕ್ ಭಾಷೆಗಳಿಗೆ ಪರೀಕ್ಷೆ ನಡೆಯಲಿದ್ದು, ಪರೀಕ್ಷೆ ಹಿನ್ನೆಲೆ ಪರೀಕ್ಷಾ ಕೇಂದ್ರ ಸುತ್ತಮುತ್ತ 144 ಸೆಕ್ಷನ್ ಜಾರಿಯಾಗಿದೆ.

ಪರೀಕ್ಷಾ ಅಕ್ರಮ ತಡೆಯಲು ಪರೀಕ್ಷಾ ಕೇಂದ್ರದಲ್ಲಿ ಸಿಸಿಟಿವಿ ಅಳವಡಿಕೆ ಮಾಡಿದ್ದು, ಪರೀಕ್ಷಾ ಕೇಂದ್ರ ಸುತ್ತಮುತ್ತ ಜೆರಾಕ್ಸ್ ಅಂಗಡಿ ಬಂದ್​ ಮಾಡಿದ್ದಾರೆ. ಹಾಗೆಯೇ ಮೊಬೈಲ್, ಎಲೆಕ್ಟ್ರಾನಿಕ್ ವಸ್ತುಗಳನ್ನು ಪರೀಕ್ಷಾ ಕೊಠಡಿಯೊಳಗೆ ನಿಷೇಧಿಸಲಾಗಿದೆ.

ಈ ಬಾರಿ 6,98,624 ವಿದ್ಯಾರ್ಥಿಗಳು ದ್ವೀತಿಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದು, 2023-24ನೇ ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಿಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ. ಇನ್ನು ಉಳಿದ 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ.

ಇದನ್ನೂ ಓದಿ : ಪಾಕ್ ಜಿಂದಾಬಾದ್ ಘೋಷಣೆ ಪ್ರಕರಣ : FSLಗೆ ಕಳಿಸಿದ ಆಡಿಯೋ ವಿಡಿಯೋದಲ್ಲಿ ಕನ್ಫ್ಯೂಷನ್​..!

Leave a Comment

DG Ad

RELATED LATEST NEWS

Top Headlines

ಬೆಂಗಳೂರಲ್ಲಿ ಕಾರು-ಆಟೋ ನಡುವೆ ಭೀಕರ ಅಪಘಾತ – ಆಟೋ ಸವಾರ ದುರ್ಮರಣ..!

ಬೆಂಗಳೂರು : ನಗರದಲ್ಲಿ ತಡರಾತ್ರಿ ಕಾರು ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಆಟೋ ಸವಾರ ಸಾವನ್ನಪಿರುವ ಘಟನೆ ಜ್ಞಾನಭಾರತಿಯ ಮುದ್ದಿನಪಾಳ್ಯದಲ್ಲಿ ನಡೆದಿದೆ. ಕಿರಣ್ 32 ವರ್ಷ ಅಪಘಾತದಲ್ಲಿ

Live Cricket

Add Your Heading Text Here