ನವದೆಹಲಿ : ಬಿಜೆಪಿ ಹಿರಿಯ ನಾಯಕ, ಮಾಜಿ ಉಪಪ್ರಧಾನಿ ಎಲ್.ಕೆ. ಅಡ್ವಾಣಿ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದೆ. 96 ವರ್ಷದ ಅಡ್ವಾಣಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ತಜ್ಞ ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾ ಇರಿಸಿದೆ.
ವಯೋಸಹಜ ಆರೋಗ್ಯ ಸಮಸ್ಯೆಯಿಂದ ಅಡ್ವಾಣಿ ಬಳಲುತ್ತಿದ್ದು, ಆತಂಕಕ್ಕೆ ಕಾರಣವಿಲ್ಲ. ಮುಂಜಾಗ್ರತಾಕ್ರಮವಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಮುಂಜಾಗ್ರತಾಕ್ರಮವಾಗಿ ಅವರನ್ನು ಮೂತ್ರಶಾಸ್ತ್ರ(ಯುರೋಲಜಿ) ವಿಭಾಗಕ್ಕೆ ದಾಖಲು ಮಾಡಲಾಗಿದೆ.
ಇತ್ತೀಚೆಗಷ್ಟೇ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಭಾರತ ರತ್ನ’ಕ್ಕೆ ಅಡ್ವಾಣಿ ಪಾತ್ರರಾಗಿದ್ದರು. ವಯೋಸಹಜ ಕಾರಣಗಳಿಂದಾಗಿ ರಾಷ್ಟ್ರಪತಿ ಭವನಕ್ಕೆ ಬರಲಾಗದ ಹಿನ್ನೆಲೆಯಲ್ಲಿ ಸ್ವತಃ ರಾಷ್ಟ್ರಪತಿ ದೌಪದಿ ಮುರ್ಮು ಅವರೇ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗಣ್ಯರ ಸಮ್ಮುಖದಲ್ಲಿ ಅಡ್ವಾಣಿ ಮನೆಗೆ ತೆರಳಿ ಅವರಿಗೆ ‘ಭಾರತ ರತ್ನ’ ಪ್ರದಾನ ಮಾಡಿದ್ದರು.
ಇದನ್ನೂ ಓದಿ : ಕದ್ದ ಚಿನ್ನಾಭರಣ ಖರೀದಿ – ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಅಟ್ಟಿಕಾ ಬಾಬು ಬಂಧನ..!