ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ. ನಾ ಡಿಸೋಜ ತೀವ್ರ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. 88 ವರ್ಷದ ಡಿಸೋಜ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಸಂಜೆ 7.50ಕ್ಕೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ 1937ರ ಜೂನ್ 6ರಂದು ನಾ ಡಿಸೋಜ ಜನಿಸಿದರು. ಪರಿಸರ ಕಾಳಜಿ ಜೊತೆಗೆ ಕನ್ನಡ ಸಾಹಿತ್ಯ ಲೋಕದಲ್ಲಿ ಮಕ್ಕಳ ಸಾಹಿತ್ಯವನ್ನು ಒಳಗೊಂಡಂತೆ ಅಪಾರವಾದ ಕೃಷಿ ನಡೆಸಿದ್ದಾರೆ. ಅಲ್ಲದೆ ಅವರು ಬರೆದಿರುವ ಹಲವು ಕಾದಂಬರಿಗಳು ಸಿನಿಮಾಗಳಾಗಿ ಮೂಡಿಬಂದಿವೆ. ಇವುಗಳಲ್ಲಿ ‘ಕಾಡಿನ ಬೆಂಕಿ’ ಚಿತ್ರ ರಜತ ಕಮಲ ಪ್ರಶಸ್ತಿಯನ್ನ ಪಡೆದರೆ ‘ದ್ವೀಪ’ ಚಿತ್ರ ಸ್ವರ್ಣ ಕಮಲ ಪ್ರಶಸ್ತಿ ಗಳಿಸಿತ್ತು.
ನಾ. ಡಿಸೋಜ ಅವರು 75 ಕಾದಂಬರಿಗಳು, 6 ಚಾರಿತ್ರಿಕ ಕಾದಂಬರಿ, ಮಕ್ಕಳಿಗಾಗಿ 25 ಕಾದಂಬರಿ, 9 ಕಥಾ ಸಂಕಲನ, ಸಮಗ್ರ ಕಥೆಗಳ ಎರಡು ಸಂಪುಟಗಳು ಬರೆದಿದ್ದಾರೆ. ‘ಮುಳುಗಡೆಯ ಊರಿಗೆ ಬಂದವರು’ ಎಂಬ ಮಕ್ಕಳ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ‘ಬಾಲ ಸಾಹಿತ್ಯ ಪುರಸ್ಕಾರ’ ಸಂದಿದೆ. ‘ದ್ವೀಪ’ ಮತ್ತು ‘ಕಾಡಿನ ಬೆಂಕಿ’ ಕಾದಂಬರಿಗಳು ಚಲನಚಿತ್ರಗಳಾಗಿ ರಾಷ್ಟ್ರಿಯ ಪ್ರಶಸ್ತಿಯನ್ನು ಗಳಿಸಿವೆ.
ಇದನ್ನೂ ಓದಿ : ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಲು ಗ್ಯಾರಂಟಿ ಯೋಜನೆಗಳೇ ಕಾರಣ – ಸಿಎಂ ಆಪ್ತ ರಾಘವೇಂದ್ರ ಹಿಟ್ನಾಳ್..!