ಕಲಬುರಗಿ : ಬೈಕ್ ಹಾಗೂ ಮೂರು ಕಾರುಗಳ ಮಧ್ಯೆ ಸರಣಿ ಅಪಘಾತವಾಗಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಕಲಬುರಗಿ ತಾಲೂಕಿನ ಅವರಾದ್ ಗ್ರಾಮದಲ್ಲಿ ಬಳಿ ನಡೆದಿದೆ. ಗಾಯಾಳುಗಳನ್ನು ಅಂಬರೀಶ್, ರವಿ, ಮಲ್ಲಿಕಾರ್ಜುನ ಹಾಗೂ ನರೇಶ್ ಗುರುತಿಸಲಾಗಿದೆ.
ಬೈಕ್‌ಗೆ ಕಾರು ಡಿಕ್ಕಿ ಹೊಡೆದಿದ್ದು, ಬಳಿಕ ಕಾರಿನ ಹಿಂಬದಿಯಿಂದ ಮತ್ತೆರಡು ಕಾರುಗಳು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಸೇರಿದಂತೆ, ಕಾರಿನಲ್ಲಿದ್ದ ಮೂವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಲಬುರಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಘಟನೆಯ ಸಂಬಂಧ ಕಲಬುರಗಿ ಸಂಚಾರಿ ಠಾಣೆ-2ರಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ‘ಹೈನ’ ಸಿನಿಮಾ ಆಡಿಯೋ ರೈಟ್ಸ್ zee ಮ್ಯೂಸಿಕ್ ತೆಕ್ಕೆಗೆ..!
Post Views: 119