ಕಲಬುರಗಿ : ಕಲಬುರಗಿಯಲ್ಲಿ ಟೈರ್ ಬ್ಲಾಸ್ಟ್ ಆಗಿ ಓಮಿನಿ ಕಾರೊಂದು ಧಗ ಧಗನೇ ಹೊತ್ತಿ ಉರಿದಿದೆ. ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದ ಬಳಿ ಈ ಘಟನೆ ನಡೆದಿದೆ.
ಯಾದಗಿರಿಯಿಂದ ಕಲಬುರಗಿಗೆ ಬರುತ್ತಿದ್ದ ಓಮಿನಿ ಕಾರಿನ ಟೈರ್ ಬ್ಲಾಸ್ಟ್ ಆಗಿ ಪಲ್ಟಿ ಆಗಿದೆ. ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದೆ. ಸ್ಥಳಕ್ಕೆ ಚಿತ್ತಾಪುರ ಪೊಲೀಸರು ಭೇಟಿ ಕೊಟ್ಟಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ವಾಡಿ ಪಿಎಸ್ಐ ತೀರುಮಲೇಶ್ ಕುಂಬಾರ್ ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರೀಶಿಲನೆ ನಡೆಸಿದ್ದಾರೆ. ಈ ಸಂಬಂಧ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಪ್ರೇಮಿಗಳೆಂದು ತಿಳಿದು ಅಕ್ಕ-ತಮ್ಮನ ಮೇಲೆ ಹಲ್ಲೆ ಕೇಸ್ : 7 ಜನ ಆರೋಪಿಗಳು ಅರೆಸ್ಟ್..!
Post Views: 968