ಬೆಂಗಳೂರು : ರೈತನ ಬಟ್ಟೆ ಕೊಳೆಯಾಗಿದೆ ಅಂತ ಇತ್ತೀಚೆಗಷ್ಟೇ ಸಿಬ್ಬಂದಿ ನಮ್ಮ ಮೆಟ್ರೋದೊಳಗೆ ಬಿಡದೆ ತಡೆದಿದ್ದರು. ಇದರ ಬೆನ್ನಲ್ಲೇ ಇದೀಗ ಬಟ್ಟೆ ಸರಿಯಿಲ್ಲ ಅಂತ ಮೊಟ್ರೋ ಸಿಬ್ಬಂದಿ ಕಾರ್ಮಿಕನನ್ನು ತಡೆದು ನಿಲ್ಲಿಸಿ ಅಪಮಾನಿಸಿದ ಘಟನೆ ದೊಡ್ಡಕಲ್ಲಸಂದ್ರ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.
ಶರ್ಟ್ನ ಗುಂಡಿಯನ್ನ ಹಾಕಿಕೊಂಡು ನೀಟಾಗಿ ಬಾ, ಇಲ್ಲದಿದ್ದರೆ ಒಳಗೆ ಪ್ರವೇಶವಿಲ್ಲ ಎಂದು ಮೆಟ್ರೋ ಸಿಬ್ಬಂದಿ ಕಾರ್ಮಿಕನಿಗೆ ಹೇಳಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದ್ದು, ಸಾರ್ವಜನಿಕರು ಮೆಟ್ರೋ ಸಿಬ್ಬಂದಿಯ ಈ ವರ್ತನೆಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ಕಾರ್ಮಿಕನನ್ನು ಅವಮಾನಿಸಿದ ಮೆಟ್ರೋ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವಂತೆಯೂ ಒತ್ತಾಯಿಸಿದ್ದಾರೆ. ಇನ್ನು ಕೆಲವರು ಸಂಸದ ತೇಜಸ್ವಿ ಸೂರ್ಯರನ್ನು ಟ್ಯಾಗ್ ಮಾಡಿ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಅಂದು ರೈತನನ್ನು ಮೆಟ್ರೋದೊಳಗೆ ಬಿಡದ ಸಿಬ್ಬಂದಿ : ಇತ್ತೀಚಿಗೆ ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋ ಸಿಬ್ಬಂದಿ ರೈತನನ್ನ ಅವಮಾನಿಸಿದ್ದರು. ಬಟ್ಟೆ ಸ್ವಚ್ಛವಾಗಿಲ್ಲ ಎಂಬ ಕಾರಣಕ್ಕೆ ರೈತನನ್ನು ಮೆಟ್ರೋ ಒಳಗೆ ಬಿಡದೆ ಸಿಬ್ಬಂದಿ ಅವಮಾನ ಮಾಡಿದ್ದರು. ಇದು ಸಹ ಪ್ರಯಾಣಿಕನ ಮೊಬೈಲ್‌ನಲ್ಲಿ ಸೆರೆಯಾಗಿತ್ತು. ರೈತನನ್ನು ಒಳಗೆ ಬಿಡದ ಸಿಬ್ಬಂದಿ ವಿರುದ್ಧ ಸಹ ಪ್ರಯಾಣಿಕರು ಕಿಡಿಕಾರಿದ್ದರು.
ಇದನ್ನೂ ಓದಿ : ಇತಿಹಾಸ ಬರೆದ ಮುಂಬೈ ಷೇರು ಮಾರುಕಟ್ಟೆ – ಇದೇ ಮೊದಲ ಬಾರಿ 75,000 ಅಂಕಗಳ ಗಡಿ ದಾಟಿದ ಸೆನ್ಸೆಕ್ಸ್..!