ಬಾಲಿವುಡ್ನ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾ ಮನೆ ಹಾಗೂ ಕಚೇರಿ ಮೇಲೆ ED ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ಹಿಂದೆ ಅಶ್ಲೀಲ ಚಿತ್ರ ತಯಾರಿಕೆ ಪ್ರಕರಣದಲ್ಲಿ ರಾಜ್ ಕುಂದ್ರಾ ಬಂಧನಕ್ಕೀಡಾಗಿದ್ದರು. ಇದೀಗ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ರಾಜ್ ಕುಂದ್ರಾ ಮನೆ ಮೇಲೆ ದಾಳಿ ನಡೆಸಿದೆ.
ಅಶ್ಲೀಲ ಸಿನಿಮಾ ನಿರ್ಮಾಣ ಮತ್ತು ಹಂಚಿಕೆ ಪ್ರಕರಣ ಎದುರಿಸುತ್ತಿರುವ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ರಾಜ್ಕುಂದ್ರಾಗೆ ಸೇರಿದ ಹಲವು ಕಡೆ ED ಅಧಿಕಾರಿಗಳು ರೇಡ್ ಮಾಡಿದ್ದಾರೆ. ಹಾಗೆಯೇ ಕುಂದ್ರಾ ಆಪ್ತರ ಮನೆ ಮೇಲೂ ಅಧಿಕಾರಿಗಳು ದಾಳಿ ಮಾಡಿದ್ದಾರೆ.
2021 ರಲ್ಲಿ ರಾಜ್ ಕುಂದ್ರಾ ಅಶ್ಲೀಲ ವಿಡಿಯೋ ಚಿತ್ರೀಕರಣ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಯಿತು. ಈ ಕಾರಣದಿಂದಾಗಿ ಅವರನ್ನು ಬಂಧಿಸಲಾಯಿತು. ರಾಜ್ ಕುಂದ್ರಾ 2 ತಿಂಗಳ ಕಾಲ ಜೈಲಿನಲ್ಲಿದ್ದರು. ಸೆಪ್ಟೆಂಬರ್ 2021 ರಿಂದ ಜಾಮೀನಿನ ಮೇಲೆ ಹೊರಗಿದ್ದಾರೆ. ರಾಜ್ ಕುಂದ್ರಾ ಅವರ ಮನೆಯೊಂದಿಗೆ ಕಚೇರಿ ಮತ್ತು ಅವರ ಸಹಚರ ಮನೆಯ ದಾಳಿಯ ಮೇಲೂ ಶೋಧ ನಡೆಸಲಾಗುತ್ತಿದೆ.
ಇದನ್ನೂ ಓದಿ :ಸಿಎಂ ಸ್ವಾಭಿಮಾನಿ ಸಮಾವೇಶಕ್ಕೆ ಹೈಕಮಾಂಡ್ನಿಂದ ಗ್ರೀನ್ ಸಿಗ್ನಲ್..!