Download Our App

Follow us

Home » ಸಿನಿಮಾ » ಸಾಗರ್ ಪುರಾಣಿಕ್ ನಿರ್ದೇಶನದ “ವೆಂಕ್ಯಾ” ಚಿತ್ರಕ್ಕೆ ಶಿಮ್ಲಾ ಬೆಡಗಿ ರೂಪಾಲಿ ಎಂಟ್ರಿ..!

ಸಾಗರ್ ಪುರಾಣಿಕ್ ನಿರ್ದೇಶನದ “ವೆಂಕ್ಯಾ” ಚಿತ್ರಕ್ಕೆ ಶಿಮ್ಲಾ ಬೆಡಗಿ ರೂಪಾಲಿ ಎಂಟ್ರಿ..!

ರಾಷ್ಟ್ರಪ್ರಶಸ್ತಿ ವಿಜೇತ ಸಾಗರ್ ಪುರಾಣಿಕ್ ಹೊಸ ಸಿನಿಮಾ ವೆಂಕ್ಯಾ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಬಾರಿ ಸಾಗರ್ ನಿರ್ದೇಶನದ ಜೊತೆಗೆ ನಾಯಕನಾಗಿಯೂ ಬಣ್ಣ ಹಚ್ಚಿದ್ದು, ಇದೀಗ ವೆಂಕ್ಯಾ ಬಳಗಕ್ಕೆ ಯುವ ನಟಿಯರೊಬ್ಬರ ಆಗಮನವಾಗಿದೆ. ಶಿಮ್ಲಾ ಸುಂದರಿ ರೂಪಾಲಿ ಸೂದ್ ಸಾಗರ್ ಪುರಾಣಿಕ್ ಚಿತ್ರದಲ್ಲಿ ನಟಿಸ್ತಿದ್ದು, ಈ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ್ದಾರೆ.

ಮೂಲತಃ ಶಿಮ್ಲಾದವರಾದ ರೂಪಾಲಿ ಕಾಲೇಜು ದಿನಗಳಲ್ಲಿದ್ದಾಗಲೇ ಮಾಡೆಲಿಂಗ್ ಅಖಾಡಕ್ಕೆ ಇಳಿದಿದ್ದರು. ಮಾಡೆಲಿಂಗ್ ಜೊತೆ ಜೊತೆಯಲಿ ಹಲವು ಮ್ಯೂಸಿಕ್ ಆಲ್ಬಂಗಳಲ್ಲಿ ನಟಿಸಿರುವ ಈ ಶಿಮ್ಲಾ ಚೆಲುವೆ, ಹಾರ್ಡಿ ಸಂಧು ಅವರೊಂದಿಗಿನ ಸೂಪರ್ ಹಿಟ್ ಹಾಡು’ಹಾರ್ನ್ ಬ್ಲೋ’ನಲ್ಲಿ ಹೆಜ್ಜೆ ಹಾಕಿದ್ದಾರೆ. ಇದೀಗ ವೆಂಕ್ಯಾ ಸಿನಿಮಾದ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.

ರೂಪಾಲಿ ಈಗಾಗಲೇ ವೆಂಕ್ಯಾ ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ. ಅವರು ಹಿಮಾಚಲದ ಪಹಾಡಿ ಹುಡುಗಿಯಾಗಿ ನಟಿಸುತ್ತಿದ್ದಾರೆ. ಶೂಟಿಂಗ್ ಅನುಭವ ಹಂಚಿಕೊಂಡಿರುವ ರೂಪಾಲಿ, ‘ನಾವು ಇತ್ತೀಚೆಗೆ ಮನಾಲಿಯ ಮುಂದೆ ಕೈಲಾಂಗ್ನಲ್ಲಿ, ಪರ್ವತಗಳ ನಡುವೆ ಸುಂದರವಾದ ಸ್ಥಳದಲ್ಲಿ ಕೆಲವು ಭಾಗಗಳನ್ನು ಚಿತ್ರೀಕರಿಸಿದ್ದೇವೆ. ಇದು ನನ್ನ ಸಿನಿಮಾ ವೃತ್ತಿಜೀವನಕ್ಕೆ ಅದ್ಭುತ ಆರಂಭ’ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಡೊಳ್ಳು ಸಿನಿಮಾ ನಿರ್ಮಾಣ ಮಾಡಿದ್ದ ಪವನ್ ಒಡೆಯರ್ ವೆಂಕ್ಯಾನಿಗೂ ಸಾಥ್ ಕೊಟ್ಟಿದ್ದಾರೆ. ಒಡೆಯರ್ ಫಿಲ್ಮ್ಸ್ ನಡಿ ತಯಾರಾಗ್ತಿರುವ ಈ ಚಿತ್ರಕ್ಕೆ ಅವಿನಾಶ್ ವಿ ರೈ ಮತ್ತು ಮೋಹನ್ ಲಾಲ್ ಮೆನನ್ ಕೂಡ ಹಣ ಹಾಕಿದ್ದಾರೆ. ಉತ್ತರ ಕರ್ನಾಟಕವನ್ನು ಕಥೆ ಆಧಾರಿಸಿ ಮೂಡಿ ಬರ್ತಿರುವ ವೆಂಕ್ಯಾ ಚಿತ್ರದ ಚಿತ್ರಕಥೆ ಮತ್ತು ಸಂಭಾಷಣೆಯನ್ನು ಶ್ರೀನಿಧಿ ಡಿಎಸ್ ಬರೆದಿದ್ದಾರೆ, ಪ್ರಣವ್ ಮುಲೆ ಅವರ ಛಾಯಾಗ್ರಹಣ ಮತ್ತು ಹೇಮಂತ್ ಜೋಯಿಸ್ ಸಂಗೀತ ನೀಡಿದ್ದಾರೆ.

ಇದನ್ನೂ ಓದಿ : ಸೆಟ್ಟೇರಿತು “ಮೆಜೆಸ್ಟಿಕ್ 2” ಸಿನಿಮಾ – ಆದ್ರೆ ಹೀರೋ ದರ್ಶನ್ ಅಲ್ಲ..!

Btv Kannada1
Author: Btv Kannada1

Leave a Comment

RELATED LATEST NEWS

Top Headlines

ಬೈಕ್ ಸವಾರನ ಶವವನ್ನು 18 ಕಿ.ಮೀ​ ಎಳೆದೊಯ್ದು ಪರಾರಿಯಾದ ಕಾರು ಚಾಲಕ..!

ಕಾರು ಚಾಲಕನೊಬ್ಬ ಬೈಕ್​ಗೆ ಡಿಕ್ಕಿ ಹೊಡೆದು ಸವಾರನನ್ನು ಬರೋಬ್ಬರಿ 18 ಕಿಲೋ. ಮೀಟರ್​ ದೂರಕ್ಕೆ ಎಳೆದೊಯ್ದು ಪರಾರಿಯಾಗಿರುವ ಘಟನೆ ಅನಂತಪುರದಲ್ಲಿ ನಡೆದಿದೆ. ಈ ಘಟನೆ ಭಾನುವಾರ ರಾತ್ರಿ

Live Cricket

Add Your Heading Text Here