Download Our App

Follow us

Home » ಜಿಲ್ಲೆ » ಶಿವಮೊಗ್ಗ : ಕಾರ್​ ಶೋರೂಮ್​ನಲ್ಲಿ ಭಾರೀ ಅಗ್ನಿ ಅವಘಡ – ಬೆಂಕಿಯ ಕೆನ್ನಾಲಿಗೆಗೆ ಶೋ ರೂಮ್​ನಲ್ಲಿದ್ದ ಕಾರುಗಳು ಭಸ್ಮ..!

ಶಿವಮೊಗ್ಗ : ಕಾರ್​ ಶೋರೂಮ್​ನಲ್ಲಿ ಭಾರೀ ಅಗ್ನಿ ಅವಘಡ – ಬೆಂಕಿಯ ಕೆನ್ನಾಲಿಗೆಗೆ ಶೋ ರೂಮ್​ನಲ್ಲಿದ್ದ ಕಾರುಗಳು ಭಸ್ಮ..!

ಶಿವಮೊಗ್ಗ : ಶಿವಮೊಗ್ಗದ ಕಾರ್​ ಶೋರೂಮ್​ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಶಂಕರಮಠ ರಸ್ತೆಯಲ್ಲಿರುವ ಹುಂಡೈ ಕಾರ್​ ಶೋ ರೂಮ್​ನಲ್ಲಿದ್ದ ಕಾರುಗಳು ಸುಟ್ಟು ಭಸ್ಮವಾಗಿದೆ.

ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಸುದ್ದಿ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ 5 ಅಗ್ನಿಶಾಮಕ ಸಿಬ್ಬಂದಿ 2 ಗಂಟೆಗಳ ಕಾಲ ಹರಸಾಹಸ ಪಟ್ಟು ಬೆಂಕಿ ನಂದಿಸಿದ್ದಾರೆ. ಶಿವಮೊಗ್ಗದ ಕೋಟೆ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡಿರುವ ಮಾಹಿತಿ ಲಭ್ಯವಾಗಿದೆ.

ಬೆಂಕಿಯ ಜ್ವಾಲೆ ಅಕ್ಕಪಕ್ಕದ ಕಟ್ಟಡಗಳಿಗೂ ವ್ಯಾಪಿಸಿದ್ದರಿಂದ ಟಾಟಾ ಶೋರೂಂ ಕೂಡ ಧಗಧಗಿಸಿದೆ. ಬೆಂಕಿ ಹೊತ್ತಿಕೊಂಡ ವಿಷಯ ತಿಳಿದು ಜಮಾಯಿಸಿದ ನೂರಾರು ಮಂದಿ ಕೆಲ ಕಾರುಗಳನ್ನು ಬೆಂಕಿಯಿಂದ ರಕ್ಷಿಸಲು ಯತ್ನಿಸಿದ್ದಾರೆ.

ಇದನ್ನೂ ಓದಿ ; ಸಂಯುಕ್ತ ಹೆಗಡೆ ಅಭಿನಯದ ‘ಕ್ರೀಂ’ ಸಿನಿಮಾದ ಟ್ರೇಲರ್ ರಿಲೀಸ್..!

 

Btv Kannada1
Author: Btv Kannada1

Leave a Comment

RELATED LATEST NEWS

Top Headlines

ಉಡುಪಿ : ಮನೆಯಲ್ಲಿ ಮತದಾನ ಮಾಡಿದ ಕೆಲವೇ ಕ್ಷಣಗಳಲ್ಲಿ ವೃದ್ಧೆ ಸಾ*ವು..!

ಉಡುಪಿ : 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶವಿದೆ. ಹಾಗಾಗಿ ಮನೆಯಲ್ಲಿ ಮತದಾನ ಮಾಡಿದ ಕೆಲವೇ ಕ್ಷಣಗಳಲ್ಲಿ ವೃದ್ಧೆಯೊಬ್ಬರು ಸಾವನ್ನಪ್ಪಿದ್ದಾರೆ. ಪಿ.ಯಶೋಧಾ ನಾರಾಯಣ ಉಪಾಧ್ಯ

Live Cricket

Add Your Heading Text Here