ಶಿರಾಡಿ : ರಾಜ್ಯಾದ್ಯಂತ ನಿರಂತರ ಭಾರೀ ಮಳೆಯಾಗುತ್ತಿದ್ದು, ವಿವಿಧ ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುತ್ತಿದೆ. ಇದೀಗ ಕರಾವಳಿ– ಬೆಂಗಳೂರು ಸಂಪರ್ಕಿಸೋ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್) 75ರಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದೆ.
ಇಂದು ಸಕಲೇಶಪುರ ತಾಲೂಕಿನ ದೊಡ್ಡತಪ್ಪಲುವಿನ ಬಳಿ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ವಿಭಾಗದಲ್ಲಿ ಸಂಚರಿಸುತ್ತಿದ್ದ ಕಾರು, ಲಾರಿ, ಗ್ಯಾಸ್ ಟ್ಯಾಂಕರ್ ಮೇಲೆ ಗುಡ್ಡ ಕುಸಿದಿದೆ. ಭೂಕುಸಿತದಿಂದಾಗಿ ಶಿರಾಡಿ ಘಾಟ್‌ನಲ್ಲಿ ವಾಹನ ಸಂಚಾರವನ್ನು ಮತ್ತೆ ಸ್ಥಗಿತಗೊಳಿಸಲಾಗಿದೆ. ಮೂಡಿಗೆರೆ ಮೂಲಕ ಹೋಗೋ ಚಾರ್ಮಾಡಿ ಘಾಟ್ ಕೂಡಾ ಬಂದ್ ಆಗಿದ್ದು, ಕರಾವಳಿ ಜಿಲ್ಲೆಗಳನ್ನು ಸಂಪರ್ಕಿಸೋ 2 ಪ್ರಮುಖ ಘಾಟ್ಗಳು ಬಂದ್ ಆಗಿದೆ. ಇನ್ನು 15 ದಿನ ರೈಲ್ವೇ ಸಂಪರ್ಕ ಕೂಡಾ ಇರೋದಿಲ್ಲ.
ಘಾಟ್ ಪ್ರದೇಶಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಹಾಸನವಾಗಿ ಮಂಗಳೂರಿಗೆ ಆಗಮಿಸುತ್ತಿರುವ ವಾಹನಗಳು ಹಾಗೂ ಮಂಗಳೂರಿನಿಂದ ಹಾಸನ ಮಾರ್ಗವಾಗಿ ಬೆಂಗಳೂರಿಗೆ ತೆರಳುವ ವಾಹನಗಳು ಸದ್ಯ ಶಿರಾಡಿ ಘಾಟ್ ರಸ್ತೆಯಲ್ಲಿ ನೂರಾರು ಸಂಖ್ಯೆಯಲ್ಲಿ ಸಾಲುಗಟ್ಟಿ ನಿಂತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆ ರಸ್ತೆಯನ್ನ ಬಳಸದಂತೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ : ದೇವರನಾಡಿನಲ್ಲಿ ಮಹಾ ದುರಂತ : 45ಕ್ಕೂ ಹೆಚ್ಚು ಮಂದಿ ಸಾವು, ಕ್ಷಣ-ಕ್ಷಣಕ್ಕೂ ಏರುತ್ತಲೇ ಇದೆ ಸಾವಿನ ಸಂಖ್ಯೆ..!