ಗದಗ : ಶಿರಹಟ್ಟಿ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಕಾರು ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. 25 ವರ್ಷದ ಸುನಿಲ್ ಲಮಾಣಿ ಆತ್ಮಹತ್ಯೆಗೆ ಶರಣಾದ ಚಾಲಕ.
ಶಾಸಕ ಚಂದ್ರು ಲಮಾಣಿಗೆ ಸೇರಿದ ಮನೆಯಲ್ಲಿಯೇ ಚಾಲಕ ನೇಣಿಗೆ ಶರಣಾಗಿದ್ದಾನೆ. ಮನೆ ಕಟ್ಟುವ ವಿಷಯದಲ್ಲಿ ಸುನೀಲ್ ಲಮಾಣಿ ಮತ್ತು ಆತನ ಸಹೋದರರ ನಡುವೆ ಗಲಾಟೆ ನಡೆದಿತ್ತು. ಹಾಗಾಗಿ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಸುನೀಲ್ ಲಮಾಣಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ಲಕ್ಷ್ಮೇಶ್ವರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಮತ್ತೊಮ್ಮೆ ‘ಕಾಮಿಡಿ-ಲವ್’ ಸಿನಿಮಾ ಮೂಲಕ ಎಂಟ್ರಿ – ಹರೀಶ್ ರಾಜ್ ನಿರ್ದೇಶನದ “ವೆಂಕಟೇಶಾಯ ನಮಃ” ಟೀಸರ್ ಬಿಡುಗಡೆ!
Post Views: 118