ಅಮೆರಿಕ: ಸ್ಯಾಂಡಲ್ವುಡ್ ಕಿಂಗ್, ನಟ ಶಿವರಾಜ್ ಕುಮಾರ್ ಅವರ ಮನೆ ನಾಯಿ ನೀಮೋ ನಿಧನ ಆಗಿದೆ. ತಮ್ಮ ಪ್ರೀತಿಯ ನೀಮೋ ಸಾವಿಗೆ ಪತ್ನಿ ಗೀತಾ ಶಿವರಾಜ್‌ಕುಮಾರ್ ಅವರು ಅಮೆರಿಕದಿಂದಲೇ ಕಣ್ಣೀರು ಉಕ್ಕಿಸುವ ಪತ್ರ ಬರೆದಿದ್ದಾರೆ. ನೀಮೋ ಹೆಸರಿನ ನಾಯಿಯ ಸಾವಿನಿಂದ ಶಿವಣ್ಣರ ಕುಟುಂಬದಲ್ಲಿ ಅಕ್ಷರಶಃ ಸೂತಕದ ವಾತಾವರಣ ನಿರ್ಮಾಣವಾಗಿದೆ ಎಂದು ಆ ಪತ್ರದಿಂದ ತಿಳಿದುಬರುತ್ತಿದೆ. ಶಿವಣ್ಣ ಅವರ ದೊಡ್ಡ ಮಗಳು ನಿರುಪಮಾ ಅವರ ಪತಿ ದಿಲೀಪ್ ಮದುವೆಗೆ ಮೊದಲು ಆ ನಾಯಿಯನ್ನು ಗಿಫ್ಟ್ ಆಗಿ ಕೊಟ್ಟಿದ್ದರು. ಶಿವಣ್ಣ ಅವರ ಅಳಿಯಕೊಟ್ಟ ನೀಮೋ ದೊಡ್ಮನೆ ಮನೆಯ ಸದಸ್ಯನಂತೆ ಆಗಿಬಿಟ್ಟಿತ್ತು. ಆದರೆ ಇಂದು ನಾಯಿ ಮೃತಪಟ್ಟಿದೆ.
ಗೀತಾ ಶಿವರಾಜ್‌ಕುಮಾರ್ ಅವರು ಬರೆದ ಪೋಸ್ಟ್ ಹೀಗಿದೆ ; –
ನಮ್ಮ ಮನೆಯಲ್ಲಿ ನಾವು ಐದಲ್ಲಾ, ಆರು ಜನ. ಶಿವಣ್ಣ, ಗೀತಾ, ನಿಶು, ನಿವಿ, ದಿಲೀಪ್ ಮತ್ತು ನನ್ನ ಮರಿ ನೀಮೋ. ನಿರು ಹುಟ್ಟು ಹಬ್ಬಕ್ಕೆ ದಿಲೀಪ್ ಅವರು ಮದುವೆಗೆ ಮುಂಚೆ ನೀಮೋನನ್ನು ತಂದರು. ನಿತು ಡಾಕ್ಟರ್ ಆಗಿದ್ದರಿಂದ ಅವಳಿಗೆ ನೀಮೋನನ್ನು ನೋಡಿಕೊಳ್ಳಲು ಸಮಯ ಆಗೋದಿಲ್ಲ ಎಂದು ನಮ್ಮ ಮನೆಗೆ ತಂದ್ವಿ! ಹೀಗೆ ಅವನು ನಮ್ಮ ಮನೆಯಲ್ಲಿ ಆರನೆಯವನಾದ. Thanks Dileep for bringing him to our life.
ಎಲ್ಲರೂ ಅವರ ಪೆಟ್ ಹಿಂದೆ ಓಡಾಡ್ತಾ ಇರ್ತಾರೆ. ಆದ್ರೆ ನೀಮೋ ಯಾವಾಗೂ ನನ್ನ ಹಿಂದೆ. ನಾನು ಕಿಚನ್ನಲ್ಲಿ ಇರುವಾಗ ಅಥವಾ ಮನೆಯಲ್ಲಿ ಎಲ್ಲೇ ಹೋದ್ರೂ ಅವನು ಯಾವಾಗಲೂ ನನ್ನ ಹಿಂದೆ. ನನ್ನ ಕೆಲ್ಸ ಮುಗಿಯುವುದು ಎಷ್ಟೇ ಹೊತ್ತಾದರೂ ಅವನು ಮಾತ್ರ ನನ್ನ ಹಿಂದೆ. ಶಿವಣ್ಣ ಅವರ ಕಾಲ ಬಳಿ ಅಂಟಿಕೊಂಡು, ಅಂಗಲ್ ಅಡ್ಡಸ್ಟ್ ಮಾಡಿಕೊಂಡು, ನನ್ನ ಮುಖ ಕಾಣೋ ಹಾಗೆ ಕೂರ್ತಿದ್ದ ನೀಮೋ.
ನಿಮೋ, ಗೀತಾ ಇಬ್ಬರಲ್ಲ, ನಾವಿಬ್ಬರು ಒಂದೇ. ಅವನು ಬೆಳೆಯುವಾಗ ಅವನು ಎಷ್ಟೇ ದೊಡ್ಡವನಾದ್ರೂ ಮಗುವಿನಂತೆ ಆರೈಕೆ ಮಾಡಿ, ಅವನ ಊಟ, ತಿಂಡಿ, ಅವನಿಗೆ ಜ್ವರ ಬಂದರೆ ತಕ್ಷಣ ಟ್ರೀಟ್ಮೆಂಟ್. ಅದಾದ ಮೇಲೆ ಅವನಿಗೆ ಕರೆಕ್ಟ್ ಟೈಮಿಗೆ ಮೆಡಿಸಿನ್. ಹೀಗೆ ತುಂಬಾ ಕಾಳಜಿಯಿಂದ ನೋಡಿಕೊಂಡಿದ್ದು ನಿವಿ. ಈಗ ಈ ಮರಿ ನಿಸ್ವಾರ್ಥ ಪ್ರೀತಿ ಯಾರಿಂದಲೂ ತುಂಬಲು ಸಾಧ್ಯವಾಗೋಲ್ಲ, ನಾವು ಅಮೆರಿಕಾಗೆ ಬಂದ ಮೇಲೆನೆ ಅವನು ಹೊರಡಬೇಕು ಎಂದು ಅವನು ಡಿಸೈಡ್ ಮಾಡಿದ್ದ ಅನ್ಸುತ್ತೆ.
ನೋಡಿದ್ದರೂ ಅವನು ಹೋಗಿದ್ದಾನೆ ಎಂದು ನಾನು ಎಂದೂ ಒಪ್ಪಿಕೊಳ್ಳಲ್ಲ. ಪ್ರಾಣಿಗಳು ನಮ್ಮನ್ನು ಬಿಟ್ಟು ಹೋಗೋವಾಗ ನಮ್ಮ ನೋವನ್ನೂ ಅವರ ಜೊತೆಯಲ್ಲಿ ತೆಗೆದುಕೊಂಡು ಹೋಗ್ತಾರಂತೆ ನನ್ನ ನೀಮೋ ಶಿವಣ್ಣನಿಗೆ ಇದ್ದ ನೋವನ್ನು ಶಾಶ್ವತವಾಗಿ ತೆಗೆದುಕೊಂಡು ಹೋಗಿದ್ದಾನೆ.
ಲವ್ ಯೂ ನಿವೋ..
ಈ ರೀತಿ ಗೀತಾ ಶಿವರಾಜ್‌ಕುಮಾರ್ ಅವರು ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಸುದೀರ್ಘ ಪತ್ರವೊಂದನ್ನು ಬರೆದು ಪೋಸ್ಟ್ ಮಾಡಿದ್ದಾರೆ. ಸಾವಿರಾರು ಅಭಿಮಾನಿಗಳು ಪತ್ರ ಓದಿ ಭಾವುಕರಾಗಿದ್ದಾರೆ.
ಇದನ್ನೂ ಓದಿ : ಪಂಚಭೂತಗಳಲ್ಲಿ ಲೀನರಾದ ಮನಮೋಹನ್ ಸಿಂಗ್ – ಅಂತ್ಯವಾಯ್ತು ‘ಸಾಧಕ’ನ ಪರ್ವ..!