Download Our App

Follow us

Home » ಸಿನಿಮಾ » ಮಾಲೀಕನ ಎಂಟ್ರಿ… ಕರುನಾಡ ಚಕ್ರವರ್ತಿಯ ಬಹುನಿರೀಕ್ಷಿತ ಲುಕ್ ರಿಲೀಸ್​ ಮಾಡಿದ “ಉತ್ತರಕಾಂಡ”..!

ಮಾಲೀಕನ ಎಂಟ್ರಿ… ಕರುನಾಡ ಚಕ್ರವರ್ತಿಯ ಬಹುನಿರೀಕ್ಷಿತ ಲುಕ್ ರಿಲೀಸ್​ ಮಾಡಿದ “ಉತ್ತರಕಾಂಡ”..!

ಸ್ಯಾಂಡಲ್​ವುಡ್​ನ ಬಹುನಿರೀಕ್ಷಿತ ಚಿತ್ರ “ಉತ್ತರಕಾಂಡ” ಇದೀಗ ಬಹು ಬೇಡಿಕೆಯಲ್ಲಿದ್ದ ಲುಕ್ ಒಂದನ್ನು ರಿಲೀಸ್​ ಮಾಡಿದೆ. ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ಅವರ ಫಸ್ಟ್​​ಲುಕ್ ಬಿಡುಗಡೆ ಮಾಡಿದ್ದು, “ಮಾಲೀಕ”ನ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿರುವ ಶಿವಣ್ಣ ತಮ್ಮ ಲುಕ್ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಅಭಿಮಾನಿಗಳು ಶಿವಣ್ಣನ ಲುಕ್​ ನೋಡಿ ಫಿದಾ ಆಗಿದ್ದಾರೆ.

ಪ್ರತಿ ಒಂದು ಪಾತ್ರದಲ್ಲೂ, ವಿಶಿಷ್ಟವಾಗಿ ಕಾಣುವ ಶಿವಣ್ಣ, ಇದೀಗ “ಉತ್ತರಕಾಂಡ”ದಲ್ಲೂ ತಮ್ಮ ಲುಕ್ ಮೂಲಕ ಎಲ್ಲರ ಮನೆ ಮಾತಾಗಿದ್ದಾರೆ‌. ಬಹು ನಿರೀಕ್ಷಿತ ಚಿತ್ರ “ಉತ್ತರಕಾಂಡ” ಒಂದು ಆಕ್ಷನ್‌ ಡ್ರಾಮಾ ಚಿತ್ರವಾಗಿದ್ದು, ಇದು ರೋಹಿತ್‌ ಪದಕಿಯ ಕೃತಿಯಾಗಿದೆ. ಚಿತ್ರಕ್ಕೆ ಖ್ಯಾತ ಗಾಯಕ, ಸಂಯೋಜಕ ಅಮಿತ್‌ ತ್ರಿವೇದಿ ಸಂಗೀತ ಸಂಯೋಜನೆ ಮಾಡಿದ್ದು, ಅಧ್ವೈತ ಗುರುಮೂರ್ತಿ ಮುಖ್ಯ ಛಾಯಾಗ್ರಾಹಕರಾಗಿ ಕೆಲಸ ನಿರ್ವಹಿಸಿದ್ದಾರೆ.

ಚಿತ್ರಕ್ಕೆ ವಿಶ್ವಾಸ್‌ ಕಶ್ಯಪ್‌ ಪ್ರೊಡಕ್ಷನ್‌ ವಿನ್ಯಾಸ ಮಾಡಿದ್ದು, ಅನಿಲ್ ಅನಿರುದ್ಧ್ ಮುಖ್ಯ ಸಂಕಲನಕಾರರಾಗಿ ಕಾರ್ಯ ನಿರ್ವಹಿಸಿದ್ದಾರೆ. ಕಾರ್ತಿಕ್‌ ಗೌಡ ಮತ್ತು ಯೋಗಿ ಜಿ ರಾಜ್‌ ಕೆ.ಆರ್.ಜಿ. ಸ್ಟೂಡಿಯೋಸ್‌ ಬ್ಯಾನರ್‌ ಅಡಿಯಲ್ಲಿ ಚಿತ್ರವನ್ನು ನಿರ್ಮಿಸಿದ್ದಾರೆ.

ಬಹು ಪ್ರಮುಖ ತಾರಾಬಳಗವನ್ನು ಹೊಂದಿರುವ  ಈ ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಡಾ.ಶಿವರಾಜ್‌ ಕುಮಾರ್‌, ನಟರಾಕ್ಷಸ ಡಾಲಿ ಧನಂಜಯ, ಭಾವನಾ ಮೆನನ್‌, ಐಶ್ವರ್ಯ ರಾಜೇಶ್‌, ದಿಗಂತ್‌ ಮುಂತಾದವರು ಬಣ್ಣ ಹಚ್ಚಿದ್ದಾರೆ.

ಇದನ್ನೂ ಓದಿ : ಅಪ್ಪನ ನೆನಪಿನ ಸಂಭ್ರಮ – ಮೈಸೂರಲ್ಲಿ ‘ಫಾದರ್’ ಚಿತ್ರದ ಬಗ್ಗೆ ಡಾರ್ಲಿಂಗ್ ಕೃಷ್ಣ, ಪ್ರಕಾಶ್ ರಾಜ್ ಏನಂದ್ರು ಗೊತ್ತಾ?

Leave a Comment

DG Ad

RELATED LATEST NEWS

Top Headlines

ಚಿತ್ರದುರ್ಗದಲ್ಲಿ ಖಾಸಗಿ ಬಸ್ಸನ್ನೇ ಕದ್ದು ಎಸ್ಕೇಪ್ ಆಗಿರೋ ಖತರ್ನಾಕ್ ಕಳ್ಳರು..!

ಚಿತ್ರದುರ್ಗ : ಖಾಸಗಿ ಬಸ್​​ವೊಂದನ್ನು ಕದ್ದು ಕಳ್ಳರು ಎಸ್ಕೇಪ್ ಆಗಿರುವ ಘಟನೆ ಚಿತ್ರದುರ್ಗದ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದಿದೆ. ನಾಯಕನಹಟ್ಟಿ ಮೂಲದ SRE ಬಸ್ ಮಾಲೀಕ ಸಯ್ಯದ್

Live Cricket

Add Your Heading Text Here