ಬೆಂಗಳೂರು : ಮಾಜಿ ಶಾಸಕ ಕುಮಾರ್ ಬಂಗಾರಪ್ಪ ನಿವಾಸಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿಮಾನಿಗಳ ಸಂಘ, ರಾಜ್ ಕುಮಾರ್ ಅಭಿಮಾನಿಗಳ ಸಂಘ ಹಾಗೂ ಕನ್ನಡಪರ ಸಂಘಟನೆಗಳು ಇಂದು ಮುತ್ತಿಗೆ ಹಾಕಿವೆ.
ಶಿವರಾಜ್ ಕುಮಾರ್ ಹಾಗೂ ರಾಜ್ ಕುಮಾರ್ ಕುಟುಂಬದ ಬಗ್ಗೆ ಲಘುವಾಗಿ ಮಾತಾಡಿದ್ದಾರೆ. ಅದು ನಮಗೆ ನೋವಾಗಿದೆ ಅವರನ್ನ ಹೊರಗೆ ಕರೆಸಿ ಕ್ಷಮೆ ಕೇಳುವಂತೆ ಆಗ್ರಹಿಸಿ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ.
ಅಭಿಮಾನಿಗಳು ಮನೆ ಗೇಟ್ ಒಳಗೆ ನುಗ್ಗಿ ಕುಮಾರ್ ಬಂಗಾರಪ್ಪ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಶಿವಣ್ಣ ಅಭಿಮಾನಿಗಳ ನಡುವೆ ಮಾತಿನ ಚಕಮಕಿ ನಡೆದಿದೆ.
ಬಳಿಕ ಮನೆ ಬಾಗಿಲಿನಿಂದ ಹೊರ ಹೋಗುವಂತೆ ಪೊಲೀಸರು ಅಭಿಮಾನಿಗಳಲ್ಲಿ ಮನವಿ ಮಾಡಿದರು. ಸದ್ಯ ಕುಮಾರ್ ಬಂಗಾರಪ್ಪ ನಿವಾಸಕ್ಕೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.
ಇದನ್ನೂ ಓದಿ : ಹೊಸತನದೊಂದಿಗೆ ಮೋಡಿ ಮಾಡಲು ಹೊಸ ಜೋಡಿಗಳ ಜೊತೆ ಬರ್ತಿದೆ ‘ರಾಜಾರಾಣಿ ರೀಲೋಡೆಡ್’..!
Post Views: 233