Download Our App

Follow us

Home » ಸಿನಿಮಾ » ಅದ್ಧೂರಿಯಾಗಿ ಸೆಟ್ಟೇರಿದ ಶಿವಣ್ಣನ 131ನೇ ಸಿನಿಮಾ – ತಮಿಳು ಡೈರೆಕ್ಟರ್ ಜೊತೆ ಕೈ ಜೋಡಿಸಿದ ಹ್ಯಾಟ್ರಿಕ್ ಹೀರೋ..!

ಅದ್ಧೂರಿಯಾಗಿ ಸೆಟ್ಟೇರಿದ ಶಿವಣ್ಣನ 131ನೇ ಸಿನಿಮಾ – ತಮಿಳು ಡೈರೆಕ್ಟರ್ ಜೊತೆ ಕೈ ಜೋಡಿಸಿದ ಹ್ಯಾಟ್ರಿಕ್ ಹೀರೋ..!

ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ನಟಿಸುತ್ತಿರುವ ಬಹುನಿರೀಕ್ಷಿತ ಸಿನಿಮಾ ಭೈರತಿ ರಣಗಲ್ ರಿಲೀಸ್​​ಗೆ ರೆಡಿಯಾಗಿದ್ದು, ಇದೀಗ ಶಿವಣ್ಣನ 131ನೇ ಸಿನಿಮಾಗೆ ಚಾಲನೆ ಸಿಕ್ಕಿದೆ. ವರಮಹಾಲಕ್ಷ್ಮೀ ಹಬ್ಬದ ಶುಭದಿನದಂದು ಬೆಂಗಳೂರಿನ‌ ಕಂಠೀರವ ಸ್ಟುಡಿಯೋದಲ್ಲಿ ಚಿತ್ರಕ್ಕೆ ಚಾಲನೆ ಸಿಕ್ಕಿದ್ದು, ನಿರ್ಮಾಪಕ ಎಸ್ ಎನ್ ರೆಡ್ಡಿ ಕ್ಲ್ಯಾಪ್ ಮಾಡಿದರು. ಅದ್ಧೂರಿಯಾಗಿ ಮುಹೂರ್ತ ಆಚರಿಸಿಕೊಂಡಿರುವ ಚಿತ್ರತಂಡ ಇಂದಿನಿಂದ ಶೂಟಿಂಗ್ ಅಖಾಡಕ್ಕೆ‌ ಇಳಿಯುತ್ತಿದೆ.

ಮುಹೂರ್ತದ ಬಳಿಕ ಸುದ್ದಿಗೋಷ್ಠಿಯಲ್ಲಿ ಚಿತ್ರದ ಬಗ್ಗೆ ಮಾತನಾಡಿದ ಶಿವಣ್ಣ, 2 ವರ್ಷಗಳ ಹಿಂದೆ ಚಿತ್ರತಂಡ ಕಥೆ ಹೇಳಿದ್ದರು. ಯಾಕೆ ಇಷ್ಟು ಲೇಟ್ ಎಂದು ಕೇಳಬೇಡಿ. ಮೊದಲ ಬಾರಿಗೆ ಸ್ಕ್ರೀಪ್ಟ್ ಕೇಳಿದಾಗ ತುಂಬಾ ಚೆನ್ನಾಗಿ ಇತ್ತು. ಅಲ್ಲಿ ಏನೋ ಬೇಕಾಗಿತ್ತು ಎಂದು ಹೇಳುತ್ತಿದ್ದೆ. ಆದರೆ ಇಂಟ್ರೆಸ್ಟಿಂಗ್ ಇತ್ತು. ಈ ಚಿತ್ರದಲ್ಲಿ ಎಲ್ಲರಿಗೂ ಕೆಲಸವಿದೆ. ಡೈಲಾಗ್ ರೈಟರ್, ಕ್ಯಾಮೆರಾ ಮೆನ್​​ಗೆ ತುಂಬಾ ಕೆಲಸವಿದೆ. ಮ್ಯೂಸಿಕ್ ಡೈರೆಕ್ಟರ್​​ಗೂ ತುಂಬ ತುಂಬ ಕೆಲಸವಿದೆ. ಎಲ್ಲಾ ಆರ್ಟಿಸ್ಟ್ ಗೂ ಕೆಲಸವಿದೆ. ಒಂದು ಸಿನಿಮಾವೆಂದರೆ ಟೆಕ್ನಿಕಲ್ ಅಂತಾರೆ ಇಲ್ಲ ಆಕ್ಟರ್ಸ್ ಸಿನಿಮಾ ಎಂದು ಕರೆಯುತ್ತಾರೆ. ಇದು ಎಲ್ಲರ ಸಿನಿಮಾ. ಕಲಾವಿದರು, ತಂತ್ರಜ್ಞನರ ಸಿನಿಮಾ. ಜನ ಕುತೂಹಲದಿಂದ ಸಿನಿಮಾ ನೋಡಬೇಕು. ನಾನು ನವೀನ್ ಜೊತೆ ಮೊದಲ ಬಾರಿಗೆ ಕೆಲಸ ಮಾಡುತ್ತಿದ್ದೇನೆ. ಚಿತ್ರದಲ್ಲಿ ಇನ್ನೊಂದು ಸರ್ ಪ್ರೈಸ್ ಕ್ಯಾರೆಕ್ಟರ್ ಇದೆ. ಪ್ರತಿಯೊಂದು ಕೆಲಸದಲ್ಲಿ ದೇವರು ನಂಬುತ್ತೇವೆ. ಆದರೆ ಮನುಷ್ಯರೇ ದೇವರನ್ನು ನಂಬುತ್ತಾರೆ. ಇದು ಚಿತ್ರದ ಕಥೆಯ ಎಳೆ ಎಂದರು.

ನಿರ್ದೇಶಕ ಕಾರ್ತಿಕ್ ಅದ್ವೈತ್ ಅವರು, ನನಗೆ ಕನ್ನಡ ಮಾತನಾಡಲು ಬರುವುದಿಲ್ಲ. ಚಿತ್ರ ಬಿಡುಗಡೆಯಾಗುವಷ್ಟರಲ್ಲಿ ಕನ್ನಡ ಮಾತನಾಡುತ್ತೇನೆ ಎಂದು ಪ್ರಾಮಿಸ್ ಮಾಡುತ್ತೇನೆ. ಶಿವಣ್ಣ ಕಥೆ, ಕ್ಯಾರೆಕ್ಟರ್ ಮೇಲೆ ನಂಬಿಕೆ ಇಟ್ಟು ನನಗೆ ಸಿನಿಮಾ ನಿರ್ದೇಶನಕ್ಕೆ ಅವಕಾಶ ಕೊಟ್ಟಿದ್ದಾರೆ. ಅವರಿಗೆ ಧನ್ಯವಾದ. ನನ್ನ ಇಬ್ಬರು ನಿರ್ಮಾಪಕರು ಚಿತ್ರದ ಮುಖ್ಯ ಪಿಲ್ಲರ್ ಎಂದು ತಿಳಿಸಿದರು.

ಶಿವಣ್ಣನ 131ನೇ ಚಿತ್ರಕ್ಕೆ ಕಾರ್ತಿಕ್ ಅದ್ವೈತ್ ಹೇಳುತ್ತಿದ್ದಾರೆ. ತಮಿಳು ಚಿತ್ರವೊಂದನ್ನು ನಿರ್ಮಿಸಿರುವ ಅವರೀಗ ಈ ಸಿನಿಮಾ ಮೂಲಕ ಸ್ಯಾಂಡಲ್​​ವುಡ್ ಅಂಗಳಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಶಿವಣ್ಣನ 131ನೇ ಚಿತ್ರ ಆ್ಯಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿದ್ದು, ಶಿವಣ್ಣ ಡಿಫ್ರೆಂಟ್ ಲುಕ್​​ನಲ್ಲಿ, ವಿಭಿನ್ನ ಪಾತ್ರದಲ್ಲಿ ಕಾಣಸಿಕೊಳ್ಳಲಿದ್ದಾರೆ. ಘೋಸ್ಟ್ ಖ್ಯಾತಿಯ ವಿಎಂ ಪ್ರಸನ್ನ ಹಾಗೂ ಸೀತಾರಾಮಂ ಖ್ಯಾತಿಯ ಜಯಕೃಷ್ಣ ಬರಹಗಾರರಾಗಿ ಸಾಥ್ ಕೊಡುತ್ತಿದ್ದಾರೆ. ವಿಕ್ರಂ ವೇದ, ಆರ್ ಡಿ ಎಕ್ಸ್, ಖೈದಿ ಸಿನಿಮಾ ಖ್ಯಾತಿಯ ಸ್ಯಾಮ್ ಸಿ.ಎಸ್ ಸಂಗೀತ ಒದಗಿಸಲಿದ್ದಾರೆ. ಎ.ಜೆ ಶೆಟ್ಟಿ ಛಾಯಾಗ್ರಹಣ ನಿರ್ವಹಿಸಲಿದ್ದಾರೆ. ದೀಪು ಎಸ್ ಕುಮಾರ್ ಅವರ ಸಂಕಲನ ಹಾಗೂ ರವಿ ಸಂತೆಹಕ್ಲು ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿರಲಿದೆ. ಭುವನೇಶ್ವರಿ ಪ್ರೊಡಕ್ಷನ್ ನಡಿ ಎಸ್ ಎನ್ ರೆಡ್ಡಿ ಹಾಗೂ ಸುಧೀರ್ ಪಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದು, ಸಹ ನಿರ್ಮಾಪಕರಾಗಿ ಸುಮನ್ ಬಿ, ರಮಣ ರೆಡ್ಡಿ ಕಾರ್ಯಕಾರಿ ನಿರ್ಮಾಪಕರಾಗಿ ಸಾಥ್ ಕೊಟ್ಟಿದ್ದಾರೆ.

ಇದನ್ನೂ ಓದಿ : ರಾಜ್ ಬಿ ಶೆಟ್ಟಿ ನಟನೆಯ ‘ರಕ್ಕಸಪುರದೋಳ್’ ಚಿತ್ರಕ್ಕೆ ರಕ್ಷಿತ-ಪ್ರೇಮ್ ಸಾಥ್..!

Leave a Comment

DG Ad

RELATED LATEST NEWS

Top Headlines

ಮೈಸೂರಿನಲ್ಲಿ ಹಾಡಹಗಲೇ ಮನೆ ಕಳ್ಳತನಕ್ಕೆ ಯತ್ನ – ದೃಶ್ಯ ಸಿಸಿಟಿವಿಯಲ್ಲಿ ಸೆರೆ..!

ಮೈಸೂರು : ಮೈಸೂರಿನಲ್ಲಿ ಹಾಡುಹಗಲೇ ಮನೆಗಳ್ಳತನಕ್ಕೆ ಯತ್ನಿಸಿದ್ದ ಖದೀಮನ ಕಳ್ಳತನದ ಯತ್ನ ವಿಫಲವಾಗಿದೆ. ಜಿಲ್ಲೆಯ ಬನ್ನೂರಿನ ರಾಮದೇವರ ಬೀದಿಯಲ್ಲಿ ಜಯಮ್ಮ ಎಂಬುವರಿಗೆ ಸೇರಿದ ಮನೆಯಲ್ಲಿ ಕಳ್ಳತನದ ಯತ್ನ

Live Cricket

Add Your Heading Text Here