Download Our App

Follow us

Home » ಸಿನಿಮಾ » ‘ಶಿವಶರಣ ಮೋಳಿಗೆ ಮಾರಯ್ಯ’ ಸಿನಿಮಾಕ್ಕೆ ಕೊಪ್ಪಳ ಶ್ರೀಗವಿ ಸಿದ್ದೇಶ್ವರ ಮಠದ ಶ್ರೀಗಳಿಂದ ಚಾಲನೆ..!

‘ಶಿವಶರಣ ಮೋಳಿಗೆ ಮಾರಯ್ಯ’ ಸಿನಿಮಾಕ್ಕೆ ಕೊಪ್ಪಳ ಶ್ರೀಗವಿ ಸಿದ್ದೇಶ್ವರ ಮಠದ ಶ್ರೀಗಳಿಂದ ಚಾಲನೆ..!

ಹೆಸರಾಂತ ‘ಶಿವಶರಣ ಮೋಳಿಗೆ ಮಾರಯ್ಯ’ ಚಿತ್ರ ಅಕ್ಷಯ ತೃತೀಯ ಹಾಗೂ ಬಸವ ಜಯಂತಿ ಶುಭದಿನದಂದು ಕೊಪ್ಪಳದ ಶ್ರೀಗವಿ ಸಿದ್ದೇಶ್ವರ ಮಠದಲ್ಲಿ ಆರಂಭವಾಗಿದೆ. ಪೂಜ್ಯ ಗವಿ ಸಿದ್ದೇಶ್ವರ ಮಠದ ಶ್ರೀಗಳು ಚಿತ್ರಕ್ಕೆ ಚಾಲನೆ ನೀಡಿದ್ದಾರೆ.

 

“ಶ್ರೀ ಜಗನ್ನಾಥದಾಸರು”, ” ಶ್ರೀಪ್ರಸನ್ನವೆಂಕಟದಾಸರು” ಹಾಗೂ ಇತ್ತೀಚಿಗೆ ತೆರೆಕಂಡ “ದಾಸವರೇಣ್ಯ ಶ್ರೀ ವಿಜಯದಾಸರು” ಸೇರಿದಂತೆ ನಾಡಿನ ಹೆಸರಾಂತ ಹರಿದಾಸರ ಚಿತ್ರಗಳ ನಿರ್ದೇಶಕ ಮಧುಸೂದನ್ ಹವಾಲ್ದಾರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಮಾತಾಂಬುಜ ಮೂವೀಸ್ ಅರ್ಪಿಸುವ ಹಾಗೂ ಹವಾಲ್ದಾರ್ ಫಿಲಂಸ್ ನ ಮೂಲಕ ಮಧುಸೂದನ್ ಹವಾಲ್ದಾರ್ ಅವರೆ ಈ ಚಿತ್ರವನ್ನು ನಿರ್ಮಿಸುತ್ತಿರುವುದಲ್ಲದೆ, ಸಂಗೀತ ನಿರ್ದೇಶನವನ್ನು ಮಾಡುತ್ತಿದ್ದಾರೆ. ಆರು ಹಾಡುಗಳು ಹಾಗೂ ವಚನಗಳು ಈ ಚಿತ್ರದಲ್ಲಿರುತ್ತದೆ. ಆನೆಗುಂದಿ, ಕೊಪ್ಪಳ, ಬಾಗಲಕೋಟೆ ಹಾಗೂ ಹಂಪಿಯ ಆಸುಪಾಸಿನಲ್ಲಿ ಚಿತ್ರೀಕರಣ ನಡೆಯಲಿದೆ. ಸಿ.ನಾರಾಯಣ ಈ ಚಿತ್ರದ ಛಾಯಾಗ್ರಾಹಕರು.

ಶಿವಶರಣ ಮೋಳಿಗೆ ಮಾರಯ್ಯ ಅವರು ಕಾಶ್ಮೀರದ ರಾಜರಾಗಿದ್ದವರು. ಅವರು ಕಲ್ಯಾಣಕ್ಕೆ ಬರುತ್ತಾರೆ. ಶರಣ ತತ್ವಕ್ಕೆ ಮನಸೋತ್ತು ಶಿವಶರಣರಾಗುತ್ತಾರೆ. ರಾಜ್ಯವನ್ನು ಮಗನಿಗೆ ಒಪ್ಪಿಸುತ್ತಾರೆ. ದಿನವೂ ಕಟ್ಟಿಗೆ ಮಾರಿ ಅದರಿಂದ ಬಂದ ಹಣದಿಂದ ದಿನ ದಾಸೋಹ ಮಾಡಿಸುತ್ತಿರುತ್ತಾರೆ. ಇಂತಹ ಮಹಾಮಹಿಮ ಶಿವಶರಣರ ಜೀವನ ಚರಿತ್ರೆಯನ್ನು ತೆರೆಗೆ ತರಲು ತುಂಬಾ ಸಂತೋಷವಾಗಿದೆ. ನಾನು ಹಾಗೂ ಜೆ.ಎಂ.ಪ್ರಹ್ಲಾದ್ ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದೇವೆ.

ಈ ಹಿಂದೆ ಕೆಲವು ಚಿತ್ರಗಳಲ್ಲಿ ನಟಿಸರುವ ವಿಷ್ಣುವರ್ಧನ್ ಅವರು ಮೋಳಿಗೆ ಮಾರಯ್ಯ ಅವರ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಶರತ್ ಕುಮಾರ್ ದಂಡಿನ್, ಇಂಗಳಗಿ ನಾಗರಾಜ್, ಕೆ‌.ಪುರುಷೋತ್ತಮ ರೆಡ್ಡಿ, ನಿಶ್ಚಿತ ಶೆಟ್ಟಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಇದೇ ಸಂದರ್ಭದಲ್ಲಿ ನನ್ನ ನಿರ್ದೇಶನದ “ದಾಸವರೇಣ್ಯ ಶ್ರೀವಿಜಯದಾಸರು” ಚಿತ್ರ ಇಪ್ಪತ್ತೈದು ದಿನಗಳನ್ನು ಯಶಸ್ವಿಯಾಗಿ ಪೂರೈಸಿದೆ ಎಂದು ನಿರ್ದೇಶಕ ಹಾಗೂ ನಿರ್ಮಾಪಕ ಮಧುಸೂದನ್ ಹವಾಲ್ದಾರ್ ತಿಳಿಸಿದ್ದಾರೆ.

ಇದನ್ನೂ ಓದಿ : ಜೈಲಿನಿಂದ ರಿಲೀಸ್ ಆಗಿ ಮನೆಗೆ ಬರ್ತಿದ್ದಂತೆ ತಂದೆ-ತಾಯಿ ಕಾಲಿಗೆ ಬಿದ್ದ ರೇವಣ್ಣ..!

Leave a Comment

RELATED LATEST NEWS

Top Headlines

ಮೋದಿ ಮತ್ತೆ ಗೆದ್ದರೆ ತಮ್ಮ ದೇಗುಲವನ್ನು ತಾವೇ ಕಟ್ಟಿಸ್ತಾರೆ : ಸಚಿವ ಶಿವರಾಜ್​ ತಂಗಡಗಿ..!

ಕೊಪ್ಪಳ : ಮೋದಿ ಮತ್ತೆ ಗೆದ್ದರೆ ತಮ್ಮ ದೇಗುಲವನ್ನು ತಾವೇ ಕಟ್ಟಿಕೊಳ್ತಾರೆ, ರಾಮನ ಮಂದಿರ ಆಯ್ತು ಈಗ ಮೋದಿ ಮಂದಿರ ಕಟ್ತಾರೇನೋ..? ಮೋದಿಯವರ ಮಾತು ಕೇಳ್ತಾ ಇದ್ರೆ

Live Cricket

Add Your Heading Text Here