ಮೈಸೂರು : ನಾನು ಸಚಿವನಾಗಿ ದಣಿದಿದ್ದೇನೆ, ಇನ್ನೇನಿದ್ರು ಸಿಎಂ ಆಗ್ಬೇಕು. ಸಿದ್ದರಾಮಯ್ಯಗಿಂತ ಎರಡು ವರ್ಷ ವಯಸ್ಸಿನಲ್ಲಿ ದೊಡ್ಡವನು. ಆದ್ರೆ, ಈಗ ಸಿಎಂ ಸ್ಥಾನ ಖಾಲಿ ಇಲ್ಲ. ಸಿದ್ದರಾಮಯ್ಯ ಅನುಮತಿ ಕೊಟ್ರೆ ನಾನು ಸಿಎಂ ಆಗುತ್ತೇನೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಆರ್.ವಿ ದೇಶಪಾಂಡೆ ಸ್ಫೋಟಕ ಹೇಳಿಕೆ ಕೊಟ್ಟಿದ್ದಾರೆ.
ಮೈಸೂರಿನಲ್ಲಿ ಪರೋಕ್ಷವಾಗಿ ಸಿಎಂ ಆಗುವ ಆಸೆ ಬಿಚ್ಚಿಟ್ಟ ಆರ್.ವಿ.ದೇಶಪಾಂಡೆ ಅವರು, ಹೈಕಮಾಂಡ್ ಅವಕಾಶ ಕೊಟ್ರು ಸಿದ್ದರಾಮಯ್ಯ ಅನುಮತಿ ಕೊಡಬೇಕು. ಈಗ ಸಿದ್ದು ರಾಜೀನಾಮೆ ಕೊಡುವ ಪರಿಸ್ಥಿತಿ ಉದ್ಭವ ಆಗಿಲ್ಲ. ರಾಜ್ಯದ ನಾಯಕರು, ಹೈಕಮಾಂಡ್ ಸಿದ್ದರಾಮಯ್ಯ ಪರವಾಗಿದ್ದಾರೆ ಎಂದು ಮೈಸೂರಿನಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಆರ್.ವಿ ದೇಶಪಾಂಡೆ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ : ಗೌರಿ ಹಬ್ಬದಂದು ಎತ್ತಿನಹೊಳೆ ಯೋಜನೆ ಏತ ಕಾಮಗಾರಿ ಉದ್ಘಾಟನೆ..!
Post Views: 175