ದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.ಕಳೆದ 4 ತಿಂಗಳ ಅಂತರದಲ್ಲಿ ಇದು ಅವರ 2ನೇ ಭೇಟಿಯಾಗಿದ್ದಾರೆ.
ಭದ್ರಾ ಮೇಲ್ದಂಡೆ ಯೋಜನೆ ನರ್ಬಾಡ್ ಅಡಿ ಅನುದಾನ ಕಡಿತ, ರಾಜ್ಯದ ತೆರಿಗೆ ಪಾಲು ಹೆಚ್ಚಳ ಸೇರಿದಂತೆ ಹಲವು ಮಹತ್ವದ ವಿಚಾರ ಕುರಿತು ಚರ್ಚೆ ನಡೆಸಿದ್ದಾರೆ. ಪ್ರಧಾನಿ ಮೋದಿ ಅವರೊಂದಿಗೆ ಮಾತುಕತೆ ಮುಗಿದ ಬಳಿಕ ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸಭೆಯಲ್ಲಿ ಸಿಎಂ ಭಾಗಿಯಾಗಲಿದ್ದಾರೆ.
ಅನುದಾನ ಬಿಡುಗಡೆಗೆ ಮನವಿ:
ಪ್ರಧಾನಿಗಳನ್ನು ಭೇಟಿಯಾಗಿರುವ ಸಿದ್ದರಾಮಯ್ಯ ಅವರು, ರೈತರಿಗೆ ನೀಡುವ ನಬಾರ್ಡ್ ಸಾಲ ಪ್ರಮಾಣ ಹೆಚ್ಚಳ, ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ, ಮೇಕೆದಾಟು ಹಾಗೂ ಕಳಸಾ-ಬಂಡೂರಿ ಯೋಜನೆಗೆ ಅನುಮತಿ ನೀಡುವುದು, 16ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ನ್ಯಾಯಯುತ ತೆರಿಗೆ ಪಾಲು ಹಂಚಿಕೆ ಮಾಡುವುದು ಸೇರಿದಂತೆ ರಾಜ್ಯದ ಹಿತಾಸಕ್ತಿಯ ಹಲವು ವಿಚಾರಗಳನ್ನು ಒಳಗೊಂಡ ಮನವಿ ಪತ್ರವನ್ನು ನೀಡಿದ್ದಾರೆ.
ಇದನ್ನೂಓದಿ : ಕೆ.ಸಿ ಜನರಲ್ ಆಸ್ಪತ್ರೆ ಮೇಲೆ ಲೋಕಾ ರೇಡ್ – ಆಸ್ಪತ್ರೆಯಲ್ಲಿ ನಡೀತಾ 200 ಕೋಟಿ ಮೆಗಾ ಹಗರಣ?