ಬೆಂಗಳೂರು : ವಾಲ್ಮೀಕಿ ಹಗರಣದಲ್ಲಿ ರಾಜೀನಾಮೆ ಕೊಟ್ಟಿದ್ದ ಬಿ.ನಾಗೇಂದ್ರನನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲು ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. ಬೆಳಗಾವಿ ಅಧಿವೇಶನ ಬಳಿಕ ಸಂಪುಟ ಪುನರ್ ರಚನೆ ಮಾಡೋದು ಫಿಕ್ಸ್ ಆಗಿದೆ.
ಸಿಎಂ ಸಿದ್ದರಾಮಯ್ಯ ಗುರುವಾರ ನವದೆಹಲಿಗೆ ತೆರಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರನ್ನ ಭೇಟಿ ಮಾಡಿದ್ದರು. ಈ ವೇಳೆ ಮಾಜಿ ಬುಡಕಟ್ಟು ಕಲ್ಯಾಣ ಸಚಿವ ಬಿ ನಾಗೇಂದ್ರ ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಬಗ್ಗೆ ಸಿಎಂ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿದ್ದಾರೆ. ಬಿ.ನಾಗೇಂದ್ರ ಸೇರ್ಪಡೆಗೆ ಕಾಂಗ್ರೆಸ್ ಹೈಕಮಾಂಡ್ ಅಸ್ತು ಎಂದಿದೆ.
ಸಂಡೂರು ಬೈ ಎಲೆಕ್ಷನ್ನಲ್ಲಿ ಸಿಎಂ ಸಿದ್ದರಾಮಯ್ಯ ನಾಗೇಂದ್ರ ಸಂಪುಟ ಸೇರ್ಪಡೆ ಬಗ್ಗೆ ಭರವಸೆ ನೀಡಿದ್ದರು. ಕೊಟ್ಟ ಭರವಸೆಯಂತೆ ಸಿದ್ದರಾಮಯ್ಯ ಸಂಪುಟಕ್ಕೆ ನಾಗೇಂದ್ರನನ್ನು ಸೇರ್ಪಡೆ ಮಾಡಿಕೊಳ್ಳಲಿದ್ದಾರೆ.
ಇದನ್ನೂ ಓದಿ : ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿಶೀಟರ್ನ ಬರ್ಬರ ಹತ್ಯೆ..!
Post Views: 34