ಬೆಂಗಳೂರು : ಅಪ್ಪ-ಮಗ ಆಯ್ತು ಈಗ ಭವಾನಿ ರೇವಣ್ಣಗೂ ಸಂಕಷ್ಟ ಎದುರಾಗಿದೆ. ಸಂತ್ರಸ್ತೆ ಕಿಡ್ನಾಪ್ ಕೇಸ್ನಲ್ಲಿ ಭವಾನಿ ರೇವಣ್ಣಗೂ SIT ನೋಟಿಸ್ ಜಾರಿ ಮಾಡಿದೆ. ಕೆ ಆರ್ ನಗರ ಠಾಣೆಯಲ್ಲಿ ಕಿಡ್ನಾಪ್ ಕೇಸ್ ದಾಖಲಾಗಿದ್ದು, ಇಂದು ವಿಚಾರಣೆಗೆ ಹಾಜರಾಗಲು ಭವಾನಿ ರೇವಣ್ಣಗೆ SIT ನೋಟಿಸ್ ನೀಡಿದೆ. ಈಗಾಗಲೇ ಭವಾನಿ ರೇವಣ್ಣ ಸಂಬಂಧಿ ಸತೀಶ್ ಬಾಬುನನ್ನು ಅರೆಸ್ಟ್ ಮಾಡಲಾಗಿದೆ.
ಸತೀಶ್ ಬಾಬು ವಿಚಾರಣೆ ವೇಳೆ ಸಿಕ್ಕ ಮಾಹಿತಿ ಆಧರಿಸಿ ಭವಾನಿ ರೇವಣ್ಣ ನೋಟಿಸ್ ಜಾರಿ ಮಾಡಲಾಗಿದೆ. ಕಿಡ್ನಾಪ್ ಪ್ರಕರಣದ ಎರಡನೇ ಆರೋಪಿ ಸತೀಶ್ ಬಾಬು ಅವರ ಬಂಧನವಾಗಿದ್ದು, ಅವರನ್ನು ನ್ಯಾಯಾಲಯ 14 ದಿನಗಳವರಗೆ ನ್ಯಾಯಾಂಗ ಬಂಧನಕ್ಕೆ ಅದೇಶಿಸಿದೆ. ಸಂತ್ರಸ್ಥೆ ಅಪಹರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಮತ್ತು ಸತೀಶ್ ಬಾಬು ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.
ಮಾಜಿ ಸಚಿವ ಎಚ್.ಡಿ.ರೇವಣ್ಣ ತನ್ನ ತಾಯಿಯನ್ನು ಕಿಡ್ನಾಪ್ ಮಾಡಿದ್ದಾರೆಂದು ಪುತ್ರ ಮೇ.2ರಂದು ನೀಡಿದ ದೂರಿನ ಹಿನ್ನಲೆಯಲ್ಲಿ ಎರಡನೇ ಆರೋಪಿ ಸತೀಶ್ ಬಾಬು ಅವರನ್ನು ಕೆ.ಆರ್.ನಗರ ಪೊಲೀಸರು ಬಂದಿಸಿದ್ದಾರೆ. ನಂತರ ನ್ಯಾಯಾಲಯಕ್ಕೆ ಹಾಜರು ಪಡಿಲಾಗಿದ್ದು, ನ್ಯಾಯಾಧೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.
ಇದನ್ನೂ ಓದಿ : ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ : ಹೆಚ್.ಡಿ ರೇವಣ್ಣಗೂ ಲುಕ್ಔಟ್ ನೋಟಿಸ್ ಜಾರಿ..!