ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಸಂಬಂಧ SIT ಅಧಿಕಾರಿಗಳು ಕೋರ್ಟ್ಗೆ ಪ್ರಾಥಮಿಕ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಈ ಕೇಸ್ ಸಂಬಂಧ ಹೈಗ್ರೌಂಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೀಗ SIT ಅಧಿಕಾರಿಗಳಿಂದ 1ನೇ ACMM ನ್ಯಾಯಾಲಯಕ್ಕೆ ಸುಮಾರು 3000 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಸತ್ಯನಾರಾಯಣ ವರ್ಮಾ, ಸತ್ಯನಾರಾಯಣ ಇಟ್ಕಾರಿ, ವಾಲ್ಮೀಕಿ ನಿಗಮದ ಎಂಡಿ ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ, ನೆಕ್ಕುಂಟಿ ನಾಗರಾಜ್, ನಾಗೇಶ್ವರ್, ತೇಜ, ಸಾಯಿ ತೇಜ ಸೇರಿ 12 ಜನರ ಮೇಲೆ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.
ಸುಮಾರು 3000 ಪುಟಗಳ ಚಾರ್ಜ್ ಶೀಟ್ನಲ್ಲಿ ಸಾಕಷ್ಟು ಸಾಕ್ಷ್ಯಗಳನ್ನ ದಾಖಲಿಸಿದ್ದಾರೆ. ಸುಮಾರು 50 ಕೋಟಿ ಮೌಲ್ಯದ ನಗದು ಹಾಗೂ ಚಿನ್ನಾಭರಣವನ್ನ ಸೀಜ್ ಮಾಡಿ SIT ಅಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
ಇದನ್ನೂ ಓದಿ : ಯಾದಗಿರಿ PSI ಬೆನ್ನಲ್ಲೇ ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ..!
Post Views: 31