Download Our App

Follow us

Home » ರಾಷ್ಟ್ರೀಯ » ಇಂದು ಆರನೇ ಹಂತದ ಚುನಾವಣೆ – ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿ ಹಲವು ಗಣ್ಯರಿಂದ ಮತದಾನ..!

ಇಂದು ಆರನೇ ಹಂತದ ಚುನಾವಣೆ – ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿ ಹಲವು ಗಣ್ಯರಿಂದ ಮತದಾನ..!

ನವದೆಹಲಿ : ಲೋಕಸಭೆಯ 6ನೇ ಹಂತದ ಮತದಾನ ಇಂದು ನಡೆಯುತ್ತಿದ್ದು, ಒಟ್ಟು 8 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ 58 ಕ್ಷೇತ್ರಗಳಿಗೆ ಬಿರುಸಿನ ಮತದಾನ ಮುಂದುವರೆದಿದೆ. ಒಟ್ಟು 889 ಅಭ್ಯರ್ಥಿಗಳು ಕಣದಲ್ಲಿದ್ದು, ಇದೇ ಹಂತದಲ್ಲಿ ಒಡಿಶಾದ 42 ವಿಧಾನಸಭಾ ಕ್ಷೇತ್ರಗಳಿಗೂ ಮತದಾನ ನಡೆಯುತ್ತಿದೆ.

ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ. ಸಂಜೆ 5ರವರೆಗೆ ಮತದಾರರು ಮತ ಚಲಾಯಿಸಲಿದ್ದಾರೆ. ಬಿಹಾರದ 8, ಹರಿಯಾಣದ ಎಲ್ಲಾ 10 ಸ್ಥಾನಗಳು, ಜಮ್ಮು ಮತ್ತು ಕಾಶ್ಮೀರದ 1 ಸ್ಥಾನ, ಜಾರ್ಖಂಡ್‌ನ 4 ಸ್ಥಾನ, ದೆಹಲಿಯ ಎಲ್ಲಾ 7 ಸ್ಥಾನಗಳು, ಒಡಿಶಾದಲ್ಲಿ 6, ಉತ್ತರ ಪ್ರದೇಶದ 14 ಮತ್ತು ಪಶ್ಚಿಮ ಬಂಗಾಳದ 8 ಸ್ಥಾನಗಳಿಗೆ ಮತದಾನ ನಡೆಯಲಿದೆ. ಚುನಾವಣಾ ಅಖಾಡದಲ್ಲಿ ಒಟ್ಟು 889 ಅಭ್ಯರ್ಥಿಗಳಿದ್ದಾರೆ.

ಈಗಾಗಲೇ  ದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಸಿಎಂ ಅರವಿಂದ ಕೇಜ್ರಿವಾಲ್​, AICC ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ವಾದ್ರಾ ಸೇರಿದಂತೆ ಹಲವು ಗಣ್ಯರು ಮತದಾನ ಮಾಡಿದ್ದಾರೆ.

ಇದನ್ನೂ ಓದಿ : ರೇವ್ ಪಾರ್ಟಿ ಕೇಸ್​​ : ಆಂಧ್ರ ಸಚಿವ, ಎಂಎಲ್​ಎ ಆಪ್ತರು ವಶಕ್ಕೆ..!

Leave a Comment

DG Ad

RELATED LATEST NEWS

Top Headlines

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ವೇನಲ್ಲಿ ಡಿವೈಡರ್​​ಗೆ ಡಿಕ್ಕಿ ಹೊಡೆದ ಕಾರು – ತಾಯಿ, ಮಗ ಸ್ಥಳದಲ್ಲೇ ಸಾವು..!

ಮಂಡ್ಯ : ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್​ ವೇ ನಲ್ಲಿ ಭೀಕರ ರಸ್ತೆ ಅಪಘಾತಕ್ಕೆ ತಾಯಿ ಮಗ ಬಲಿಯಾಗಿರುವ ಘಟನೆ ನಡೆದಿದೆ. ರುದ್ರಾಕ್ಷಿಪುರ ಗ್ರಾಮದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಕಾರಿನಲ್ಲಿ

Live Cricket

Add Your Heading Text Here