ಮಂಡ್ಯ : ಕರ್ನಾಟಕದ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ , ಮಾಜಿ ವಿದೇಶಾಂಗ ಸಚಿವ ಎಸ್ಎಂ ಕೃಷ್ಣ ಮಂಗಳವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕೃಷ್ಣ ಅವರು ತಮ್ಮ 92ನೇ ವಯಸ್ಸಿಗೆ ನಿಧನರಾಗಿದ್ದಾರೆ.
ರಾಜಕೀಯದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಗೆದ್ದು ಶಾಸಕರಾದ ನಂತರ ಕಾಂಗ್ರೆಸ್ ಸೇರಿ 43 ವರ್ಷಗಳಲ್ಲಿ ಶಾಸಕ, ಸಚಿವ, ಮುಖ್ಯಮಂತ್ರಿ, ರಾಜ್ಯಪಾಲ ಹಾಗೂ ವಿದೇಶಾಂಗ ಸಚಿವರಂತಹ ಉನ್ನತ ಹುದ್ದೆಗಳನ್ನ ಅಲಂಕರಿಸಿ, ಮಂಡ್ಯದಿಂದ ಇಂಡಿಯಾದಲ್ಲೇ ಜನಪ್ರಿಯ ರಾಜಕಾರಣಿಯಾಗಿ ಬೆಳೆದರು.
ಇನ್ನು ಬೆಂಗಳೂರಿನಲ್ಲಿ ನಿಧನರಾಗಿರುವ ಮಾಜಿ ಸಿಎಂ ಎಸ್ಎಂ ಕೃಷ್ಣ ಅಂತ್ಯಕ್ರಿಯೆ ಅವರ ತವರು ಮದ್ದೂರಿನ ಸೋಮನಹಳ್ಳಿಯಲ್ಲಿ ಬುಧವಾರ ಸಂಜೆ ನಡೆಯಲಿದೆ. ಇಂದು ಸಂಜೆವರೆಗೂ ಬೆಂಗಳೂರಿನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನದವರೆಗೂ ಮದ್ದೂರಿನಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ 4 ಗಂಟೆ ಸುಮಾರಿಗೆ ಸಕಲ ಸರ್ಕಾರಿ ಗೌರವದೊಂದಿಗೆ ಸೋಮನಹಳ್ಳಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.
ಎಸ್ಎಂ ಕೃಷ್ಣ ಅವರಿಗೆ ಇಷ್ಟವಾದ ಜಾಗದಲ್ಲಿಯೇ, ಅಂದರೆ ಕಾಫಿಡೇ ಆವರಣದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ವಿದೇಶದಿಂದ ಸಂಬಂಧಿಕರು ಬರಬೇಕಿರುವ ಹಿನ್ನೆಲೆ ನಾಳೆ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.
ಇದನ್ನೂ ಓದಿ : RBI ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ನೇಮಕ – ಯಾರಿವರು?