ಬೆಂಗಳೂರು : ಬೆಂಗಳೂರಿನಲ್ಲಿ ನಿಧನರಾಗಿರುವ ಮಾಜಿ ಸಿಎಂ ಎಸ್ಎಂ ಕೃಷ್ಣ ಅಂತ್ಯಕ್ರಿಯೆ ಅವರ ತವರು ಮದ್ದೂರಿನ ಸೋಮನಹಳ್ಳಿಯಲ್ಲಿ ಬುಧವಾರ ಸಂಜೆ ನಡೆಯಲಿದೆ. ಎಸ್ಎಂ ಕೃಷ್ಣಗೆ ಇಷ್ಟವಾದ ಜಾಗದಲ್ಲಿಯೇ, ಅಂದರೆ ಕಾಫಿಡೇ ಆವರಣದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ನಾಳೆ ಸೋಮನಹಳ್ಳಿಯಲ್ಲಿ ನಡೆಯಲಿರುವ ಎಸ್.ಎಂ.ಕೃಷ್ಣ ಅವರ ಅಂತಿಮ ವಿಧಿವಿಧಾನದಲ್ಲಿ ಕೇಂದ್ರದ ಪ್ರತಿನಿಧಿಯಾಗಿ ಸಚಿವ ಪ್ರಹ್ಲಾದ್ ಜೋಶಿ ಭಾಗಿಯಾಗಲಿದ್ದಾರೆ.
ಇನ್ನು ಎಸ್.ಎಂ ಕೃಷ್ಣ ನಿಧನಕ್ಕೆ ಸಂತಾಪ ಸೂಚಿಸಿರುವ ಪ್ರಲ್ಹಾದ್ ಜೋಶಿ ಅವರು, ನಾಡು ಕಂಡ ಮೇರು ರಾಜಕಾರಣಿ ಎಸ್.ಎಂ.ಕೃಷ್ಣ. ಕರ್ನಾಟಕ ಒಬ್ಬ ಸಜ್ಜನ ರಾಜಕಾರಣಿಯನ್ನು ಕಳೆದುಕೊಂಡಿದೆ. ಕೃಷ್ಣ ಅವರ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ : ಬಿಗ್ಬಾಸ್ ಮನೆಯಲ್ಲಿ ನಾಮಿನೇಷನ್ ಕಿಚ್ಚು : ಗೆಸ್ಟ್ ಮುಂದೆಯೇ ಕಿತ್ತಾಡಿದ ರಜತ್-ಧನರಾಜ್..!
Post Views: 90