ಮೈಸೂರು : ಮುಡಾದ 50:50 ಹಗರಣಕ್ಕೆ ಸಂಬಂಧಿಸಿದಂತೆ, ಸಿದ್ದರಾಮಯ್ಯ ಕುಟುಂಬದ ಪ್ರಕರಣದಲ್ಲಿ ED ಲೋಕಾಯುಕ್ತಕ್ಕೆ ಬರೆದಿರುವ ಪತ್ರದ ಹಿನ್ನೆಲೆ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಮತ್ತೊಂದು ದೂರು ದಾಖಲಿಸಬೇಕು ಎಂದು ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರು, ಮೈಸೂರು ಲೋಕಾಯುಕ್ತಕ್ಕೆ ನಿನ್ನೆ ಮನವಿ ಪತ್ರ ನೀಡಿದ್ದಾರೆ.
ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ನಿನ್ನೆ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರ ಆರೋಪಿಗಳ ಮೇಲೆ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಪ್ರಕಾರ ದೂರು ದಾಖಲಿಸಿ ವಿಚಾರಣೆ ನಡೆಸುವಂತೆ ಲೋಕಾಯುಕ್ತಕ್ಕೆ ಮನವಿ ಮಾಡಿದ್ದಾರೆ.
ಮುಡಾದ 50-50 ಸೈಟ್ ಹಂಚಿಕೆ ಹಗರಣದಲ್ಲಿ ನೂರಾರು ಕೋಟಿ ವ್ಯವಹಾರ ಆಗಿದೆ ಎಂದು ED ಬರೆದ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಹೀಗಾಗಿ ಅಕ್ರಮ ಹಣ ವರ್ಗಾವಣೆ ಕಾಯ್ದೆ ಅಡಿ ಕೇಸ್ ದಾಖಲಿಸಿ ಎಂದು ಸ್ನೇಹಮಯಿ ಕೃಷ್ಣ ಮನವಿ ಮಾಡಿದ್ದಾರೆ.
ಇದನ್ನೂ ಓದಿ : ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ.. ಮಗು ಸೇರಿ 7 ಮಂದಿ ಸಾವು..!
Post Views: 66