ಬಿಚ್ಚುಗತ್ತಿ ಸಿನಿಮಾ ಮೂಲಕ ಭರವಸೆ ಹುಟ್ಟಿಸಿರುವ ಮ್ಯಾಸೀವ್ ಸ್ಟಾರ್ ರಾಜವರ್ಧನ್, ಹಿರಣ್ಯ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಹಾಜರಾಗಲು ಸಜ್ಜಾಗಿದ್ದಾರೆ. ಇದೀಗ ಈ ಚಿತ್ರದ ಮೆಲೋಡಿ ನಂಬರ್ ಬಿಡುಗಡೆಯಾಗಿದೆ. ಪ್ರಮೋದ್ ಮರವಂತೆ ಸಾಹಿತ್ಯದಲ್ಲಿ ಮೂಡಿ ಬಂದಿರುವ ಪದೇ ಪದೇ ಎಂಬ ಗೀತೆಗೆ ಸಂಚಿತ್ ಹೆಗ್ಡೆ ಧ್ವನಿಯಾಗಿದ್ದಾರೆ. ಜೂಡಾ ಸ್ಯಾಂಡ್ ಟ್ಯೂನ್ ಹಾಕಿದ್ದಾರೆ.
ಚಿತ್ರವನ್ನು ಪ್ರವೀಣ್ ಅವ್ಯೂಕ್ ನಿರ್ದೇಶನ ಮಾಡುತ್ತಿದ್ದು, ಪೂರ್ಣ ಪ್ರಮಾಣದ ನಿರ್ದೇಶಕನಾಗಿ ಇದು ಅವರಿಗೆ ಮೊದಲ ಚಿತ್ರ. ಇದಕ್ಕೂ ಮುನ್ನ ಕಿರುಚಿತ್ರಗಳನ್ನು ಮಾಡಿ ಅವರು ಸೈ ಎನಿಸಿಕೊಂಡಿದ್ದಾರೆ. ‘ವೇದಾಸ್ ಇನ್ಫಿನಿಟಿ ಪಿಚ್ಚರ್’ ಬ್ಯಾನರ್ನಲ್ಲಿ ವಿಘ್ನೇಶ್ವರ್ ಮತ್ತು ವಿಜಯ್ ಕುಮಾರ್ ನಿರ್ಮಾಣ ಮಾಡುತ್ತಿದ್ದಾರೆ. ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ಸ್ಪೆಷಲ್ ರೋಲ್ ನಲ್ಲಿ ನಟಿಸಿದ್ದು, ಉಳಿದಂತೆ ಹುಲಿ ಕಾರ್ತಿಕ್, ಅರವಿಂದ್ ರಾವ್, ದಿಲೀಪ್ ಶೆಟ್ಟಿ ಮುಂತಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಯುವನಟಿ ರಿಹಾನಾ ರಾಜವರ್ಧನ್‌ಗೆ ಜೋಡಿಯಾಗಿ ನಟಿಸಿದ್ದಾರೆ.
ಹಿರಣ್ಯ ಸಿನಿಮಾಕ್ಕೆ ಯೋಗೇಶ್ವರನ್ ಆರ್. ಛಾಯಾಗ್ರಹಣವಿದೆ. ಚಿತ್ರದ ಹಾಡುಗಳಿಗೆ ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜನೆಯಿದೆ. ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿರುವ ಹಿರಣ್ಯ ಸಿನಿಮಾವನ್ನು ಆದಷ್ಟು ಬೇಗೆ ತೆರೆಗೆ ತರುವ ಯೋಚನೆಯಲ್ಲಿದೆ ಚಿತ್ರತಂಡ.
ಇದನ್ನೂ ಓದಿ : ಕೊನೆಗೂ ಜನಾಕ್ರೋಶಕ್ಕೆ ಮಣಿದ ಪೊಲೀಸರು – ಅನ್ನಪೂರ್ಣೇಶ್ವರಿ ನಗರ ಠಾಣೆ ಎದುರು ಹಾಕಿದ್ದ ಬ್ಯಾರಿಕೇಡ್ ತೆರವು..!