ಸೋಶಿಯಲ್ ಮಿಡಿಯಾ ಸ್ಟಾರ್ ಆಗಿರುವ ಸೋನು ಶ್ರೀನಿವಾಸ್ ಗೌಡ ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಆರೋಪದ ಮೇಲೆ ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಇದೀಗ ಮಗವನ್ನು ದತ್ತು ಪಡೆದ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸೋನು ಶ್ರೀನಿವಾಸ ಗೌಡಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರಿನ ಮಸ್ಕಿ ತಾಲೂಕಿನ ಕಾಚಾಪುರದಲ್ಲಿ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ. ಸೋನು ಗೌಡಳನ್ನು ಸಹ ಬ್ಯಾಡರಹಳ್ಳಿ ಪೊಲೀಸರು ರಾಯಚೂರು ಜಿಲ್ಲೆಗೆ ಈಗಾಗಲೇ ಕರೆದುಕೊಂಡು ಹೋಗಿದ್ದಾರೆ.
ಬೆಂಗಳೂರು ಪೊಲೀಸರು ಮಸ್ಕಿಯ ಕಾಚಾಪುರ ಗ್ರಾಮಕ್ಕೆ ಸೋನುಗೌಡಳನ್ನು ಕರೆದುಕೊಂಡು ಹೋಗಿ ಮಗುವಿನ ಮನೆಗೆ ಭೇಟಿ ನೀಡಿದ್ದಾರೆ. ಬೇಟಿ ನೀಡಿದ ಬಳಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎನ್ಕ್ವೈರಿ ನಡೆಸಿದ್ದಾರೆ.
ಪ್ರಕರಣದ ಹಿನ್ನೆಲೆ : ಸೋನು ಶ್ರೀನಿವಾಸ್ ಗೌಡ ಉತ್ತರ ಕರ್ನಾಟಕ ಭಾಗದ 8 ವರ್ಷದ ಮಗುವನ್ನು ದತ್ತು ತೆಗೆದುಕೊಂಡಿದ್ದರು. ಆದರೆ, ಅವರು ಕಾನೂನು ಬಾಹಿರವಾಗಿ ಅವರು ಮಗುವನ್ನು ದತ್ತು ಪಡೆದಿದ್ದಾರೆ ಎಂಬ ಕಾರಣಕ್ಕೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಜೆ.ಜೆ.ಆ್ಯಕ್ಟ್ ಅಡಿಯಲ್ಲಿ ದೂರು ದಾಖಲಾಗಿದೆ. ಮಕ್ಕಳ ಕಲ್ಯಾಣ ಇಲಾಖೆಯಿಂದ ಸೋನು ಗೌಡ ವಿರುದ್ಧ ದೂರ ದಾಖಲಾಗಿದೆ. ಈ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ.
ಬ್ಯಾಡರಹಳ್ಳಿ ಪೊಲೀಸರು ಸೋನು ಶ್ರೀನಿವಾಸ್ ಗೌಡ ಬಂಧಿಸಿದ್ದಾರೆ. ಮಗು ದತ್ತು ಪಡೆದಿರುವುದಾಗಿ, ಮಗುವಿನ ಫೋಟೋವನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಎಂಟು ವರ್ಷದ ಮಗುವನ್ನು ಕಾನೂನು ಬಾಹಿರವಾಗಿ ಅವರು ದತ್ತು ಪಡೆದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ದೂರು ನೀಡಿದ್ದರು. ದತ್ತು ಪಡೆದಿರುವ ಹೆಣ್ಣು ಮಗುವನ್ನು ಪ್ರಚಾರಕ್ಕೆ ಬಳಸಿಕೊಂಡಿರುವ ಆರೋಪ ಸೋನು ಮೇಲಿದೆ. ಸಾರ್ವಜನಿಕವಾಗಿ ಮಗುವಿನ ಮಾಹಿತಿ ಹಂಚಿಕೊಳ್ಳುವಂತಿಲ್ಲ. ಇನ್ನು ದತ್ತು ಪಡೆಯಲು ಅನುಸರಿಬೇಕಾದ ಕಾನೂನಾತ್ಮಕ ಪ್ರಕ್ರಿಯೆಗಳನ್ನು ಸಹ ಸರಿಯಾಗಿ ಮಾಡಿಲ್ಲ ಎಂಬ ಆರೋಪ ಸಹ ಇದೆ. ಸದ್ಯ ಪೊಲೀಸರು ಆಕೆಯನ್ನು ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಆನೇಕಲ್ನಲ್ಲಿ ಪುಡಿ ರೌಡಿಗಳ ಅಟ್ಟಹಾಸ – ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹ*ಲ್ಲೆ..!