ಬೆಂಗಳೂರು : ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದಿದ್ದ ಪ್ರಕರಣ ಸಂಬಂಧ ಜೈಲು ಸೇರಿದ್ದ ಸೋನು ಶ್ರೀನಿವಾಸ್ ಗೌಡಗೆ ಇದೀಗ ಜಾಮೀನು ಮಂಜೂರಾಗಿದೆ. PDJ ಕೋರ್ಟ್ನಿಂದ ಜಾಮೀನು ಮಂಜೂರಾಗಿದ್ದು, ಕೋರ್ಟ್ ಇಬ್ಬರು ಶ್ಯೂರಿಟಿ, 1 ಲಕ್ಷ ಬಾಂಡ್ ಷರತ್ತು ವಿಧಿಸಿದೆ.
ಕಾನೂನು ಬಾಹಿರವಾಗಿ ಮಗವನ್ನು ದತ್ತು ಪಡೆದಿದ್ದ ಕೇಸ್ನಲ್ಲಿ ಸೋನು ಜೈಲು ಸೇರಿದ್ದರು. ಬ್ಯಾಡರಹಳ್ಳಿ ಪೊಲೀಸರಿಂದ ಮಾರ್ಚ್ 22ರಂದು ಸೋನು ಬಂಧನವಾಗಿದ್ದರು. ವಕೀಲ ಪ್ರಕಾಶ್ ಅವರು ಸೋನು ಶ್ರೀನಿವಾಸ್ಗೌಡ ಪರ ಜಾಮೀನು ಅರ್ಜಿ ಸಲ್ಲಿಸಿದ್ದರು. ಸೋನು ಶ್ರೀನಿವಾಸ್ಗೌಡ ಪರವಾಗಿ ವಕೀಲ ಪ್ರಕಾಶ್ ವಾದ ಮಂಡಿಸಿದ್ದು, ಇದೀಗ PDJ ಕೋರ್ಟ್ನಿಂದ ಜಾಮೀನು ಮಂಜೂರಾಗಿದೆ.
ಸೋನು ಶ್ರೀನಿವಾಸ್ ಗೌಡ ಉತ್ತರ ಕರ್ನಾಟಕ ಮೂಲದ 8 ವರ್ಷದ ಹೆಣ್ಣು ಮಗುವನ್ನು ದತ್ತು ತೆಗೆದುಕೊಂಡಿದ್ದರು. ಆದರೆ, ಅವರು ಕಾನೂನು ಬಾಹಿರವಾಗಿ ಅವರು ಮಗುವನ್ನು ದತ್ತು ಪಡೆದಿದ್ದಾರೆ ಎಂದು ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಜೆ.ಜೆ.ಆ್ಯಕ್ಟ್ ಅಡಿಯಲ್ಲಿ ದೂರು ದಾಖಲಾಗಿದೆ. ಹಾಗಾಗಿ ಮಕ್ಕಳ ಕಲ್ಯಾಣ ಇಲಾಖೆಯಿಂದ ಸೋನು ಗೌಡ ವಿರುದ್ಧ ದೂರ ದಾಖಲಾಗಿದೆ. ಈ ಆರೋಪದ ಮೇಲೆ ಸೋನು ಶ್ರೀನಿವಾಸ್ ಗೌಡಗೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿತ್ತು.
ಇದನ್ನೂ ಓದಿ : ಫ್ರೀ ಟಿಕೆಟೂ ಬೇಡ.. ಬಿಟ್ಟಿ 2 ಸಾವಿರ ಹಣನೂ ಬೇಡ – ಕಾಂಗ್ರೆಸ್ ಗ್ಯಾರಂಟಿ ಯೋಜನೆ ವಿರುದ್ಧ ಹೆಚ್ಡಿಕೆ ವಾಗ್ದಾಳಿ..!