Download Our App

Follow us

Home » ಸಿನಿಮಾ » ಎಲ್ಲೆಡೆ ಸದ್ದು ಮಾಡುತ್ತಿದೆ ರಿಯಲ್ ಸ್ಟಾರ್​ ಉಪೇಂದ್ರ ನಟನೆಯ “UI” ಚಿತ್ರದ “ಸೌಂಡ್ ಆಫ್ ಯುಐ”..!

ಎಲ್ಲೆಡೆ ಸದ್ದು ಮಾಡುತ್ತಿದೆ ರಿಯಲ್ ಸ್ಟಾರ್​ ಉಪೇಂದ್ರ ನಟನೆಯ “UI” ಚಿತ್ರದ “ಸೌಂಡ್ ಆಫ್ ಯುಐ”..!

ರಿಯಲ್ ಸ್ಟಾರ್ ಉಪೇಂದ್ರ ನಟನೆ ಹಾಗೂ ನಿರ್ದೇಶನದ ‘ಯುಐ’ (UI) ಚಿತ್ರ ಆರಂಭದಿಂದಲೂ ಕುತೂಹಲ ಹುಟ್ಟಿಸಿರುವ ಚಿತ್ರ. ಇತ್ತೀಚೆಗೆ ಈ ಚಿತ್ರದ ಮ್ಯೂಸಿಕಲ್ ಜರ್ನಿಯ ಮೊದಲ ಝಲಕ್ ‘ಸೌಂಡ್ ಆಫ್ ಯುಐ’ ಬಿಡುಗಡೆಯಾಗಿದೆ. 1 ನಿಮಿಷ 24 ಸೆಕೆಂಡ್​ಗಳ ಈ ಮ್ಯೂಸಿಕ್ ಝಲಕ್​ನಲ್ಲಿ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಮೋಡಿ ಮಾಡಿದ್ದಾರೆ.

ಮುಂದೆ ಬಿಡುಗಡೆಯಾಗಲಿರುವ ಹಾಡುಗಳ ಬಗ್ಗೆ ಕುತೂಹಲ ಹೆಚ್ಚಿದ್ದು, “ಯುಐ” ಚಿತ್ರದ ಮ್ಯೂಸಿಕ್​ಗೆ ಸಂಬಂಧ ಪಟ್ಟ ಕೆಲಸಗಳು ಅಜನೀಶ್ ಲೋಕನಾಥ್, ಸಿ.ಆರ್ ಬಾಬಿ ಹಾಗೂ ಉಪೇಂದ್ರ ಅವರ ಸಾರಥ್ಯದಲ್ಲಿ ಹಂಗೇರಿಯ ಬುಡಾಪೆಸ್ಟ್‌ನಲ್ಲಿ ನಡೆದಿದೆ.

15 ವಯೊಲಿನ್, 8 ಬೇಸ್ ಗಿಟಾರ್, 4 ಕೊಳಲು ಹೀಗೆ ಹಲವು ಇನ್‌ಸ್ಟ್ರುಮೆಂಟ್ಸ್ ಬಳಸಿಕೊಂಡು 90ಕ್ಕೂ ಅಧಿಕ ನುರಿತ ಸಂಗೀತಗಾರರು ಲೈವ್ ನಲ್ಲೇ ಕಾರ್ಯ ನಿರ್ವಹಿಸಿರುವುದು ವಿಶೇಷ. ಚಿತ್ರದಲ್ಲಿ ಬಿಜಿಎಂ ಪ್ರಮುಖಪಾತ್ರ ವಹಿಸಿದೆ. ಹಂಗೇರಿಯಲ್ಲಿ ನಡೆದ ಈ ಮ್ಯೂಸಿಕ್ ಜರ್ನಿಯ ಒಂದು ಝಲಕ್ ಅನ್ನು ಚಿಕ್ಕ ಪ್ರೋಮೊ ಮೂಲಕ “ಸೌಂಡ್ ಆಫ್ ಯುಐ” ಹೆಸರಿನಲ್ಲಿ ಚಿತ್ರತಂಡ ರಿಲೀಸ್ ಮಾಡಿದೆ.

ಹಲವು ವರ್ಷಗಳ ನಂತರ ಉಪೇಂದ್ರ ಅವರು ನಿರ್ದೇಶಿಸಿರುವ “ಯುಐ” ಚಿತ್ರವನ್ನು ಲಹರಿ ಫಿಲಂಸ್ ಹಾಗೂ ವೀನಸ್ ಎಂಟರ್‌ ಪ್ರೈಸಸ್ ಲಾಂಛನದಲ್ಲಿ ಜಿ.ಮನೋಹರನ್ ಹಾಗೂ ಕೆ.ಪಿ.ಶ್ರೀಕಾಂತ್ ನಿರ್ಮಿಸಿದ್ದಾರೆ. ನವೀನ್ ಮನೋಹರ್ ಅವರ ಸಹ ನಿರ್ಮಾಣ ಹಾಗೂ ತುಳಸಿರಾಮ ನಾಯ್ಡು(ಲಹರಿ ವೇಲು), ಜಿ.ರಮೇಶ್, ಜಿ.ಆನಂದ್, ಚಂದ್ರು ಮನೋಹರನ್ ಹಾಗೂ ನಾಗೇಂದ್ರ ಅವರು ಕಾರ್ಯಕಾರಿ ನಿರ್ಮಾಪಕರಾಗಿರುವ ಈ ಚಿತ್ರ ಅಕ್ಟೋಬರ್ ನಲ್ಲಿ ಬಿಡುಗಡೆಯಾಗಲಿದೆ. ಬಹುನಿರೀಕ್ಷೆಯಿರುವ ‘ಯುಐ’ ಚಿತ್ರ ವಿಶ್ವದಾದ್ಯಂತ ವಿಜಯಪತಾಕೆ ಹಾರಿಸಲಿದೆ. ಈ ಚಿತ್ರದಲ್ಲಿ ಉಪೇಂದ್ರ ಅವರಿಗೆ ಜೋಡಿಯಾಗಿ ರೀಷ್ಮಾ ನಾಣಯ್ಯ ನಟಿಸಿದ್ದಾರೆ.

ಇದನ್ನೂ ಓದಿ : ವಿಜಯ್ ರಾಘವೇಂದ್ರ ನಟನೆಯ ‘ರಿಪ್ಪನ್ ಸ್ವಾಮಿ’ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್​​​..!

Leave a Comment

DG Ad

RELATED LATEST NEWS

Top Headlines

MLA ಮುನಿರತ್ನ ವಿರುದ್ಧ ರೇಪ್ ಆರೋಪದ ಬೆನ್ನಲ್ಲೇ ಮಾಜಿ ಕಾರ್ಪೊರೇಟರ್ ಪತಿಯ ಹನಿಟ್ರ್ಯಾಪ್ ವಿಡಿಯೋ ವೈರಲ್..!

ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ಸೇರಿ ಏಳು ಮಂದಿಯ ವಿರುದ್ಧ ರಾಮನಗರ ಜಿಲ್ಲಾ ವ್ಯಾಪ್ತಿಯ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ

Live Cricket

Add Your Heading Text Here