ಸ್ಯಾಂಡಲ್ವುಡ್ನ ರೋರಿಂಗ್ ಸ್ಟಾರ್ ಶ್ರೀಮುರಳಿ ಇಂದು ಜನ್ಮದಿನದ ಸಂಭ್ರಮದಲ್ಲಿದ್ದಾರೆ. 43ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಸ್ಯಾಂಡಲ್ವುಡ್ ರೋರಿಂಗ್ ಸ್ಟಾರ್ಗೆ ಕುಟುಂಬ ಸದಸ್ಯರು, ಆಪ್ತರು, ಸಿನಿ ಸ್ನೇಹಿತರು ಸೇರಿದಂತೆ ಅಪಾರ ಸಂಖ್ಯೆಯ ಅಭಿಮಾನಿಗಳು ಶುಭ ಕೋರುತ್ತಿದ್ದಾರೆ.
ಇದೀಗ ಶ್ರೀಮುರಳಿ ಬರ್ತಡೇ ಪ್ರಯುಕ್ತ ‘ಪರಾಕ್’ ಎಂಬ ಹೊಸ ಚಿತ್ರ ಘೋಷಣೆಯಾಗಿದೆ. ಈ ಪೋಸ್ಟರ್ನಲ್ಲಿ, ಒಂದು ಕೈಯಲ್ಲಿ ಗನ್ ಹಿಡಿದು ಬೆನ್ನು ತೋರಿಸ್ತಿರುವ ಶ್ರೀ, ಬೆನ್ನಿಗೆ ಪಿಸ್ತೂಲ್ ಹಾಕಿ ಪ್ರತ್ಯಕ್ಷರಾಗಿದ್ದಾರೆ.
‘ಪರಾಕ್’ ಸಿನಿಮಾವನ್ನು ನವ ನಿರ್ದೇಶಕ ಹಾಲೇಶ್ ಕೋಗುಂಡಿ ನಿರ್ದೇಶನ ಮಾಡುತ್ತಿದ್ದಾರೆ. ಒಂದಷ್ಟು ಕಿರು ಚಿತ್ರಗಳನ್ನು ನಿರ್ದೇಶಿಸಿರುವ ಅನುಭವವಿರುವ ಹಾಲೇಶ್, ಪರಾಕ್ ಸಿನಿಮಾ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ.
ಇನ್ನು ಮಾರ್ಚ್ನಲ್ಲಿ ಪರಾಕ್ ಚಿತ್ರದ ಶೂಟಿಂಗ್ ಶುರುವಾಗಲಿದೆ. ದೊಡ್ಡ ಬಜೆಟ್ , ದೊಡ್ಡ ತಾರಾಗಣದಲ್ಲಿ ಚಿತ್ರ ನಿರ್ಮಾಣ ಮಾಡಲು ಚಿತ್ರ ಸಜ್ಜಾಗುತ್ತಿದೆ. ಬ್ರ್ಯಾಂಡ್ ಸ್ಟುಡಿಯೋಸ್ ಬ್ಯಾನರ್ ನಡಿ ಪರಾಕ್ ಸಿನಿಮಾ ನಿರ್ಮಾಣವಾಗುತ್ತಿದೆ.
ಇದನ್ನೂ ಓದಿ : ಶಬರಿಮಲೆಯಲ್ಲಿ ಸ್ಕೈವಾಕ್‌ನಿಂದ ಜಿಗಿದು ಕರ್ನಾಟಕದ ಅಯ್ಯಪ್ಪ ಭಕ್ತ ಆತ್ಮಹತ್ಯೆ..!