ಮುಂಬೈ : ಕನ್ನಡದ ನಟಿ ಶ್ರೀಲೀಲಾ ಅವರು ಸೂಪರ್ ಹಿಟ್ ‘ಪುಷ್ಪ 2’ ಚಿತ್ರದಲ್ಲಿ ಕಿಸ್ಸಿಕ್ ಹಾಡಿಗೆ ಸೊಂಟ ಬಳುಕಿಸಿದ ಮೇಲೆ ಬೇಡಿಕೆ ಹೆಚ್ಚಾಗಿದೆ. ಬಾಲಿವುಡ್‌ಗೆ ಪಾದಾರ್ಪಣೆ ಮಾಡಲು ಸಕಲ ತಯಾರಿ ಮಾಡಿಕೊಂಡಿದ್ದಾರೆ. ಇದೀಗ ಸೈಫ್ ಅಲಿ ಖಾನ್ ಪುತ್ರ ಇಬ್ರಾಹಿಂ ಅಲಿ ಖಾನ್ ಜೊತೆ ಶ್ರೀಲೀಲಾ ಮುಂಬೈನಲ್ಲಿ ಕಾಣಿಸಿಕೊಂಡಿದ್ದಾರೆ.
ಕೆಲ ತಿಂಗಳುಗಳಿಂದ ಶ್ರೀಲೀಲಾ ಬಾಲಿವುಡ್ ಎಂಟ್ರಿ ಬಗ್ಗೆ ಸಾಕಷ್ಟು ವಿಚಾರಗಳು ಚರ್ಚೆಗೆ ಗ್ರಾಸವಾಗಿತ್ತು. ಇಬ್ರಾಹಿಂ ಅಲಿ ಖಾನ್‌ಗೆ ಶ್ರೀಲೀಲಾ ನಾಯಕಿ ಎಂಬ ಸುದ್ದಿ ಭಾರೀ ವೈರಲ್ ಆಗಿತ್ತು. ಆದರೆ ಅದು ಯಾವುದಕ್ಕೂ ಕ್ಲ್ಯಾರಿಟಿ ಸಿಕ್ಕಿರಲಿಲ್ಲ. ಈಗ ‘ಸ್ತ್ರೀ 2’ ಸಿನಿಮಾ ನಿರ್ಮಿಸಿದ್ದ ಮಾಡೋಕ್ ಫಿಲ್ಮ್ಸ್ ಆಫೀಸ್‌ಗೆ ನಟಿ ಭೇಟಿ ನೀಡಿದ್ದಾರೆ. ಈ ವೇಳೆ, ಇಬ್ರಾಹಿಂ ಜೊತೆ ಶ್ರೀಲೀಲಾ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ಸಖತ್ ಗ್ಲ್ಯಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಜೊತೆಯಾಗಿ ಸಿನಿಮಾ ಮಾಡುವ ಬಗ್ಗೆ ಪಕ್ಕಾ ಆಗಿದೆ.
ಅಂದಹಾಗೆ, ಶ್ರೀಲೀಲಾ ಲಿಸ್ಟ್‌ನಲ್ಲಿ 5ಕ್ಕೂ ಹೆಚ್ಚು ಸಿನಿಮಾಗಳಿವೆ. ನಿತಿನ್ ಜೊತೆಗಿನ ‘ರಾಬಿನ್‌ಹುಡ್’ ಸಿನಿಮಾ, ಪವನ್ ಕಲ್ಯಾಣ್ ಜೊತೆ ಉಸ್ತಾದ್ ಭಗತ್ ಸಿಂಗ್, ಧಮಾಕ ಬಳಿಕ ರವಿತೇಜ ಜೊತೆ 2ನೇ ಬಾರಿ ಹೊಸ ಚಿತ್ರಕ್ಕೆ ನಟಿ ಶ್ರೀಲೀಲಾ ಓಕೆ ಎಂದಿದ್ದಾರೆ. ‘ಮಾಸ್ ಜಾತ್ರ’ ಎಂದು ಟೈಟಲ್ ಕೂಡ ಇಡಲಾಗಿದೆ.
ಶಿವಕಾರ್ತಿಕೇಯನ್ ನಟನೆಯ 25ನೇ ಚಿತ್ರಕ್ಕೆ ಶ್ರೀಲೀಲಾ ನಾಯಕಿಯಾಗಿದ್ದಾರೆ. ಈ ಮೂಲಕ ತಮಿಳಿಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಸುಧಾ ಕೊಂಗರ ಅವರು ನಿರ್ದೇಶನ ಮಾಡುತ್ತಿದ್ದಾರೆ. ಇದರೊಂದಿಗೆ ಜನಾರ್ಧನ್ ರೆಡ್ಡಿ ಪುತ್ರನ ಜೊತೆ ಕನ್ನಡದ ಸಿನಿಮಾ ಮಾಡುತ್ತಿದ್ದಾರೆ.
ಇದನ್ನೂ ಓದಿ : ಮದುವೆ ಸಮಾರಂಭಕ್ಕೆ ಅಶೋಕ್ ಖೇಣಿಗೆ ಆಮಂತ್ರಣ – ಡಾಲಿ ಧನಂಜಯ್ಗೆ ಶುಭಕೋರಿದ ನೈಸ್ ಸಂಸ್ಥೆ ಮುಖ್ಯಸ್ಥ!