Download Our App

Follow us

Home » ರಾಜಕೀಯ » ಬಿಜೆಪಿ ಹಿರಿಯ ನಾಯಕ ಶ್ರೀನಿವಾಸ ಪ್ರಸಾದ್ ನಿಧನಕ್ಕೆ ರಾಜಕೀಯ ಗಣ್ಯರಿಂದ ಸಂತಾಪ..!

ಬಿಜೆಪಿ ಹಿರಿಯ ನಾಯಕ ಶ್ರೀನಿವಾಸ ಪ್ರಸಾದ್ ನಿಧನಕ್ಕೆ ರಾಜಕೀಯ ಗಣ್ಯರಿಂದ ಸಂತಾಪ..!

ಬೆಂಗಳೂರು : ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು-ಚಾಮರಾಜನಗರ ಭಾಗದ ದಲಿತ ನಾಯಕ ವಿ.ಶ್ರೀನಿವಾಸ ಪ್ರಸಾದ್ ಅವರು ನಿಧರಾಗಿದ್ದು, ಅವರ ಅಗಲಿಕೆಗೆ ಹಲವು ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ.

ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ : ಹಿರಿಯ ನಾಯಕ, ಮಾಜಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.”ಶೋಷಿತರ ಪರ ಗಟ್ಟಿ ದನಿಯಾಗಿದ್ದ, ಮಾರ್ಗದರ್ಶಕರು, ಹಿತೈಷಿಗಳು ಆಗಿದ್ದ ಶ್ರೀನಿವಾಸ್ ಪ್ರಸಾದ್ (75) ಅವರ ಅಗಲಿಕೆ ಸುದ್ದಿ ಕೇಳಿ ನೋವಾಗಿದೆ. ಇವರ ನಿಧನದಿಂದ ಮೌಲ್ಯಧಾರಿತ ರಾಜಕಾರಣದ ಕೊಂಡಿ ಮರೆಯಾದಂತಾಗಿದೆ. ಶ್ರೀನಿವಾಸ್ ಪ್ರಸಾದ್ ಅವರು ಕೇಂದ್ರ ಹಾಗೂ ರಾಜ್ಯದಲ್ಲಿ ಸಚಿವರಾಗಿ ಅನನ್ಯ ಸೇವೆ ಸಲ್ಲಿಸಿದ್ದಾರೆ. ಕೇಂದ್ರ ಸಚಿವರಾಗಿದ್ದಾಗ ಕರ್ನಾಟಕ ರಾಜ್ಯದ ಬೇಡಿಕೆಗಳಿಗೆ ದನಿಯಾಗಿದ್ದರು. ಕಿರಿಯ ರಾಜಕಾರಣಿಗಳಿಗೆ ಮಾರ್ಗದರ್ಶಕರಾಗಿದ್ದರು, ಮಾದರಿಯಾಗಿದ್ದರು. ಯಾವುದೇ ಪಕ್ಷ ಅಧಿಕಾರದಲ್ಲಿದ್ದರೂ ಶೋಷಿತರ ಪರ ದನಿ ಎತ್ತುತ್ತಿದ್ದರು. ವಿಧಾನಸಭೆ ಹಾಗೂ ಸಂಸತ್ ಪ್ರತಿನಿಧಿಸಿದ್ದರು. ಕೆಲ ಕಾಲ ಇವರು ಹಾಗೂ ನಾನು ಸಂಪುಟ ಸಹೋದ್ಯೋಗಿಗಳಾಗಿದ್ದೆವು. ಈ ವೇಳೆ ಅವರ ರಾಜಕೀಯ ಜಾಣ್ಮೆಯನ್ನು ಹತ್ತಿರದಿಂದ ಕಂಡಿದ್ದೇನೆ. ಇವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಕುಟುಂಬ ವರ್ಗ, ಅಭಿಮಾನಿಗಳಿಗೆ ಭಗವಂತನು ಕರುಣಿಸಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದು ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಶ್ರೀನಿವಾಸ ಪ್ರಸಾದ್ ಅವರ ನಿಧನಕ್ಕೆ ವಿಜಯೇಂದ್ರ ಸಂತಾಪ : ಬಿಜೆಪಿಯ ಹಿರಿಯ ಮುಖಂಡ, ಚಾಮರಾಜನಗರ ಕ್ಷೇತ್ರದ ಸಂಸದ ವಿ. ಶ್ರೀನಿವಾಸ ಪ್ರಸಾದ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಕೇಂದ್ರದ ಮಾಜಿ ಆಹಾರ ಸಚಿವರಾದ ಅವರು 6 ಬಾರಿ ಸಂಸದರಾಗಿ, ಎರಡು ಬಾರಿ ಶಾಸಕರಾಗಿ ಜನಪ್ರಿಯತೆ ಪಡೆದಿದ್ದರು ಎಂದು ವಿಜಯೇಂದ್ರ ಅವರು ಸಂತಾಪ ಸೂಚಿಸಿದ್ದಾರೆ. ಅವರ ಕುಟುಂಬಸ್ಥರು ಬಂಧುಮಿತ್ರರು ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.

ಸಿ.ಟಿ ರವಿ : ದಕ್ಷಿಣ ಕರ್ನಾಟಕದ ದಲಿತಸೂರ್ಯ ಅಸ್ತಂಗತ. ಹಿರಿಯ ನಾಯಕರು, ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದರಾದ ಶ್ರೀ ವಿ.ಶ್ರೀನಿವಾಸ್ ಪ್ರಸಾದ್ ವಿಧಿವಶರಾದ ಸುದ್ದಿ ನೋವನ್ನುಂಟು ಮಾಡಿದೆ. ಪ್ರಭಾವಿ ದಲಿತ ಮುಖಂಡರಾಗಿ , ಸಂಸದೀಯ ಪಟುವಾಗಿ ರಾಜ್ಯ ರಾಜಕೀಯದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಇವರ ನಿಧನ ರಾಜ್ಯ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ. ಮೃತರ ಆತ್ಮಕ್ಕೆ ಸದ್ಗತಿ ಸಿಗಲೆಂದು ಹಾಗೂ ಕುಟುಂಬದ ಸದಸ್ಯರಿಗೆ,ಬಂಧು ಮಿತ್ರ ಅಭಿಮಾನಿಗಳಿಗೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.

ಡಾ.ಕೆ ಸುಧಾಕರ್‌ : ನಾಡಿನ ಮುತ್ಸದ್ಧಿ ನಾಯಕರಾದ ಶ್ರೀ ಶ್ರೀನಿವಾಸ ಪ್ರಸಾದ್ ಅವರ ನಿಧನದ ಸುದ್ದಿ ಆಘಾತ ಮೂಡಿಸಿದೆ. ಕೇಂದ್ರ ಹಾಗು ರಾಜ್ಯ ಸಚಿವರಾಗಿ, ಆರು ಬಾರಿ ಸಂಸದರಾಗಿ, ಎರಡು ಬಾರಿ ಶಾಸಕರಾಗಿ ಸುಮಾರು ಐದು ದಶಕಗಳ ಸುದೀರ್ಘ ಸಾರ್ವಜನಿಕ ಜೀವನ ನಡೆಸಿದ ಶ್ರೀ ಶ್ರೀನಿವಾಸ್ ಪ್ರಸಾದ್ ಅವರ ಅಗಲಿಕೆಯಿಂದ ನಮ್ಮ ನಾಡು ಒಬ್ಬ ಶ್ರೇಷ್ಠ ಜನನಾಯಕನನ್ನು ಕಳೆದುಕೊಂಡಿದೆ. ಶ್ರೀಯುತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ಸದಸ್ಯರು, ಬಂಧು-ಮಿತ್ರರು ಹಾಗೂ ಅಭಿಮಾನಿಗಳಿಗೆ ಈ ಅಗಲಿಕೆಯ ನೋವನ್ನು ಸಹಿಸುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ.

ವಿ. ಸೋಮಣ್ಣ : ಹಿರಿಯ ರಾಜಕೀಯ ನಾಯಕರು ಹಾಗೂ ಸಂಸದರಾದ ಶ್ರೀ ವಿ. ಶ್ರೀನಿವಾಸ್ ಪ್ರಸಾದ್ ರವರ ನಿಧನದ ಸುದ್ದಿ ಕೇಳಿ ಅತ್ಯಂತ ದುಃಖವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಹಾಗೂ ಕುಟುಂಬದ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.

ಇದನ್ನೂ ಓದಿ : ದಲಿತ ದಮನಿತರ ಪರವಾದ ದಿಟ್ಟ ದನಿಯಾಗಿದ್ದರು – ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಕಂಬನಿ..!

Leave a Comment

DG Ad

RELATED LATEST NEWS

Top Headlines

ಬೆಂಗಳೂರಿಗೆ ನಾಯಿ ಮಾಂಸ ರವಾನೆ ಆರೋಪ : ರೈಲ್ವೆ ನಿಲ್ದಾಣದಲ್ಲಿ ಹೈಡ್ರಾಮಾ – ಪೋಲಿಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪುನೀತ್ ಕೆರೆಹಳ್ಳಿ ಅರೆಸ್ಟ್..!

ಬೆಂಗಳೂರು : ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಸರಬರಾಜು ಆಗುವ ಮಟನ್ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ನಿನ್ನೆ (ಜುಲೈ 26) ರಾಜಸ್ಥಾನದಿಂದ ಬಂದ

Live Cricket

Add Your Heading Text Here