ಮಂಡ್ಯ : ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಮಂಡ್ಯ ಶ್ರೀರಂಗಪಟ್ಟಣದ ವೆಲ್ಲೆಸ್ಲಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಬ್ರಿಟಿಷರ ಕಾಲದಲ್ಲಿ ನಿರ್ಮಾಣವಾಗಿದ್ದ ಸ್ವಾತಂತ್ರ ಪೂರ್ವದಲ್ಲಿ ಮೈಸೂರು ಬೆಂಗಳೂರಿಗೆ ಕೊಂಡಿಯಾಗಿದ್ದ ವೆಲ್ಲೆಸ್ಲಿ ಸೇತುವೆ ಮುಳುಗಡೆಯಾಗಿದೆ.
ಕಾವೇರಿ ನದಿಗೆ 1 ಲಕ್ಷದ 70 ಸಾವಿರ ಕ್ಯೂ. ನೀರು ಹರಿಸಿದ್ದು, ವೆಲ್ಲೆಸ್ಲಿ ಸೇತುವೆ ನೆಲಕಚ್ಚಿದೆ. ಇನ್ನೂ ಕಾವೇರಿ ಜಲಾನಯನ ಪ್ರದೇಶದಲ್ಲಿನ ಭಾರೀ ಮಳೆಗೆ ಕೃಷ್ಣರಾಜಸಾಗರ ಜಲಾಶದ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದೆ. ಜುಲೈ 31 ರಂದು ಸಂಜೆ 5 ಗಂಟೆಗೆ ಕೆ.ಆರ್.ಎಸ್ ಜಲಾಶಯದಿಂದ 1,70,000 ಕ್ಯೂಸೆಕ್ಸ್ ಹೊರ ಬಿಡಲಾಗಿದೆ.
ಕಾವೇರಿ ನದಿ ಪಾತ್ರದಲ್ಲಿನ ಸಾರ್ವಜನಿಕರು ಸ್ವಯಂ ಮುಂಜಾಗ್ರತೆ ವಹಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಡಾ. ಕುಮಾರ ರವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಇದನ್ನೂ ಓದಿ : ವಿಷ್ಣು ಮಂಚು ನಟನೆಯ ‘ಕಣ್ಣಪ್ಪ’ ಚಿತ್ರದಲ್ಲಿ ಮಧುಬಾಲ ಫಸ್ಟ್ಲುಕ್ ರಿಲೀಸ್..!
Post Views: 254