Download Our App

Follow us

Home » ರಾಜ್ಯ » ಇಂದು SSLC ಫಲಿತಾಂಶ ಪ್ರಕಟ – ಎಷ್ಟು ಗಂಟೆಗೆ? ರಿಸಲ್ಟ್ ನೋಡುವುದು ಹೇಗೆ? ಇಲ್ಲಿದೆ ಮಾಹಿತಿ..!

ಇಂದು SSLC ಫಲಿತಾಂಶ ಪ್ರಕಟ – ಎಷ್ಟು ಗಂಟೆಗೆ? ರಿಸಲ್ಟ್ ನೋಡುವುದು ಹೇಗೆ? ಇಲ್ಲಿದೆ ಮಾಹಿತಿ..!

2023-24ನೇ ಸಾಲಿನ SSLC ಪರೀಕ್ಷೆಯ ಫಲಿತಾಂಶಕ್ಕೆ ಸಮಯ ನಿಗದಿಯಾಗಿದೆ. ಇಂದು (ಮೇ 09) ಬೆಳಗ್ಗೆ 10.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಟಿಯಲ್ಲಿ ಫಲಿತಾಂಶ ಘೋಷಣೆ ಮಾಡಲಿದೆ. ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಲಿ ಅಧ್ಯಕ್ಷೆ ಎನ್. ಮಂಜುಶ್ರೀ ಅವರು ಮಾಹಿತಿ ನೀಡಿದ್ದಾರೆ.

SSLC ಫಲಿತಾಂಶ ಯಾವ ವೆಬ್​​ಸೈಟ್​ನಲ್ಲಿ ದೊರೆಯುತ್ತದೆ? SSLC ಫಲಿತಾಂಶವನ್ನು ಇಲಾಖೆಯ ಅಧಿಕೃತ ವೆಬ್​ಸೈಟ್​​ಗಳಾದ kseab.karnataka.gov.in ಮತ್ತು karresults.nic.in ಗಳಲ್ಲಿ ವೀಕ್ಷಿಸಲು ಮತ್ತು ಡೌನ್‌ಲೋಡ್ ಮಾಡಲು ಅವಕಾಶವಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ತಿಳಿಸಿದೆ.

ಫಲಿತಾಂಶ ನೋಡುವುದು, ಡೌನ್​ಲೋಡ್ ಮಾಡುವುದು ಹೇಗೆ? ಅಧಿಕೃತ ವೆಬ್​ಸೈಟ್ karresults.nic.in ಗೆ ಭೇಟಿ ನೀಡಿ. ಮುಖಪುಟದಲ್ಲಿ SSLC Results 2024 ಲಿಂಕ್ ಅನ್ನು ಕ್ಲಿಕ್ ಮಾಡಿ. ಹೊಸ ಲಾಗಿನ್ ಪುಟವು ತೆರೆಯುತ್ತದೆ. ಬಳಿಕ ನಿಮ್ಮ ರಿಜಿಸ್ಟರ್ ನಂಬರ್ (ನೋಂದಣಿ ಸಂಖ್ಯೆ) ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ಆಗ ಫಲಿತಾಂಶ ಕಾಣಿಸಿಕೊಳ್ಳುತ್ತದೆ, ಅಲ್ಲಿ ಡೌನ್​ಲೋಡ್ ಮಾಡಬಹುದಾಗಿದೆ.

ಇನ್ನು, ಈ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಲ್ಲಿ 4,41,910 ವಿದ್ಯಾರ್ಥಿಗಳು ಮತ್ತು 4,28,058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದರು. 18,225 ಖಾಸಗಿ, 41,375 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ಇದನ್ನೂ ಓದಿ : ‘ಕೋಟಿ’ ಚಿತ್ರದ ಖಳನಾಯಕ ದಿನೂ ಸಾವ್ಕಾರ್ ಫೋಟೋ ರಿಲೀಸ್..!

Leave a Comment

DG Ad

RELATED LATEST NEWS

Top Headlines

ರವಿಶಂಕರ್ ಪುತ್ರ ಅದ್ವೈ ನಟನೆಯ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ – ಸಾಥ್ ಕೊಟ್ಟ ಶಿವಣ್ಣ..!

ಬಹುಭಾಷಾ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು

Live Cricket

Add Your Heading Text Here