Download Our App

Follow us

Home » ರಾಜ್ಯ » ಇಂದು SSLC ಪರೀಕ್ಷೆ-2ರ ಫಲಿತಾಂಶ ಪ್ರಕಟ : ಎಷ್ಟು ಗಂಟೆಗೆ? ರಿಸಲ್ಟ್ ನೋಡುವುದು ಹೇಗೆ? ಇಲ್ಲಿದೆ ಮಾಹಿತಿ..!

ಇಂದು SSLC ಪರೀಕ್ಷೆ-2ರ ಫಲಿತಾಂಶ ಪ್ರಕಟ : ಎಷ್ಟು ಗಂಟೆಗೆ? ರಿಸಲ್ಟ್ ನೋಡುವುದು ಹೇಗೆ? ಇಲ್ಲಿದೆ ಮಾಹಿತಿ..!

ಬೆಂಗಳೂರು : ರಾಜ್ಯದಲ್ಲಿ ಜೂನ್ 14 ರಿಂದ 22 ರವರಗೆ ನಡೆದಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆ-2ರ ಫಲಿತಾಂಶ ಇಂದು ಪ್ರಕಟಗೊಳ್ಳುತ್ತಿದ್ದು, ಅಧಿಕೃತ ವೆಬ್ ತಾಣದಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

2024ರ ಎಸ್​ಎಸ್​ಎಲ್​ಸಿ ಪರೀಕ್ಷೆ-2ರ ಫಲಿತಾಂಶವನ್ನು (ಜುಲೈ 10) ಇಂದು ಬೆಳಗ್ಗೆ 11:30ಕ್ಕೆ ಅಧಿಕೃತ ವೆಬ್ ಸೈಟ್ https://karresults.nic.in ನಲ್ಲಿ ಪ್ರಕಟಿಸುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

ಫಲಿತಾಂಶ ನೋಡುವುದು ಹೇಗೆ?

  • ಕರ್ನಾಟಕ ಪರೀಕ್ಷ ಮಂಡಳಿಯ ಅಧಿಕೃತ ವೆಬ್‌ಸೈಟ್‌ kseab.karnataka.gov.in ಓಪನ್‌ ಮಾಡಿ
  • ವೆಬ್‌ಸೈಟ್‌ ಮುಖಪುಟದಲ್ಲಿ ಕರ್ನಾಟಕ ಎಸ್‌ಎಸ್‌ಎಲ್‌ಸಿ ಪೂರಕ ಫಲಿತಾಂಶ 2024 ಲಿಂಕ್ ಕಾಣುತ್ತದೆ. ಆ ಲಿಂಕ್ ಕ್ಲಿಕ್‌ ಮಾಡಿ.
  • ಲಾಗ್ ಇನ್ ಮಾಡಲು ಕೇಳುವ ವಿವರಗಳನ್ನು ನಮೂದಿಸಿ.
  • ವಿವರಗಳನ್ನು ಸಬ್ಮಿಟ್‌ ಮಾಡಲು ಎಂಟರ್ ಒತ್ತಿ.
  • ಫಲಿತಾಂಶ ಪರದೆಯಲ್ಲಿ ಕಾಣುತ್ತದೆ.
  • ಫಲಿತಾಂಶ ಪರಿಶೀಲಿಸಿ ಮತ್ತು ಅದನ್ನು ಡೌನ್ಲೋಡ್ ಮಾಡಿಕೊಳ್ಳಿ

ರಾಜ್ಯದ 724 ಪರೀಕ್ಷಾ ಕೇಂದ್ರಗಳಲ್ಲಿ ಜೂನ್ 14 ರಿಂದ 22 ರವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆ-2 ನಡೆದಿದ್ದು, ಏಳು ಮಾಧ್ಯಮಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು. 1.44 ಲಕ್ಷ ಬಾಲಕರು, 79,148 ಬಾಲಕಿಯರು ಸೇರಿದಂತೆ ಒಟ್ಟು 2.23 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ-2ಕ್ಕೆ ಹೆಸರು ನೋಂದಾಯಿಸಿಕೊಂಡಿದ್ದರು. ಅವರಲ್ಲಿ 13,085 ವಿದ್ಯಾರ್ಥಿಗಳು ಫಲಿತಾಂಶ ವೃದ್ಧಿಗಾಗಿ ಎರಡನೇ ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು.

ಇದನ್ನೂ ಓದಿ : ಟೀಂ ಇಂಡಿಯಾ ಹೆಡ್ ಕೋಚ್​ ಆದ ಬೆನ್ನಲ್ಲೇ ಗೌತಮ್​ ಗಂಭೀರ್​​ ಹೇಳಿದ್ದೇನು?

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here