Download Our App

Follow us

Home » ರಾಜಕೀಯ » ಬ್ರಹ್ಮ ಬಂದ್ರೂ ನನ್ನ ನಿರ್ಧಾರ ಬದಲಾಗಲ್ಲ, ಶಿವಮೊಗ್ಗದಲ್ಲಿ ಪಕ್ಷೇತರವಾಗಿ ನಿಂತೇ ನಿಲ್ತೀನಿ : ಕೆ.ಎಸ್​ ಈಶ್ವರಪ್ಪ..!

ಬ್ರಹ್ಮ ಬಂದ್ರೂ ನನ್ನ ನಿರ್ಧಾರ ಬದಲಾಗಲ್ಲ, ಶಿವಮೊಗ್ಗದಲ್ಲಿ ಪಕ್ಷೇತರವಾಗಿ ನಿಂತೇ ನಿಲ್ತೀನಿ : ಕೆ.ಎಸ್​ ಈಶ್ವರಪ್ಪ..!

ಚಿತ್ರದುರ್ಗ : ಬ್ರಹ್ಮ ಬಂದ್ರೂ ನನ್ನ ನಿರ್ಧಾರ ಬದಲಾಗಲ್ಲ, ಶಿವಮೊಗ್ಗದಲ್ಲಿ ಪಕ್ಷೇತರವಾಗಿ ನಿಂತೇ ನಿಲ್ತೀನಿ. ನಡ್ಡಾ ಫೋನ್​ ಮಾಡಿ ಮನವೊಲಿಕೆ ಮಾಡಿಲ್ಲ, ಕುಟುಂಬ ರಾಜಕಾರಣದ ವಿರುದ್ಧ ನನ್ನ ಹೋರಾಟ ಎಂದು ಮಾಜಿ ಡಿಸಿಎಂ ಕೆ.ಎಸ್​ ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಶಿವಮೊಗ್ಗದಲ್ಲಿ ಕೆ.ಎಸ್​ ಈಶ್ವರಪ್ಪ ಮಾತನಾಡಿ, ನನಗೆ ಬಿಜೆಪಿ, ಜೆಡಿಎಸ್​, ಕಾಂಗ್ರೆಸ್​ ಕಾರ್ಯಕರ್ತರೂ ಬೆಂಬಲಿಸುತ್ತಿದ್ದಾರೆ. ಶಿವಮೊಗ್ಗದಲ್ಲಿ ಗೆಲ್ತೀನಿ, ಎರಡು ತಿಂಗಳ ನಂತ್ರ ಬಿಜೆಪಿಗೆ ಬರ್ತಿನಿ. ಬೇಡ ಅಂದ್ರೂ ಪಕ್ಷ ಬಿಟ್ಟ ಶೆಟ್ಟರ್​ ಮನೆಗೆ ಹೋಗಿ ಕರೆತರಲಿಲ್ವಾ..? ಗೋಬ್ಯಾಕ್​ ಎದುರಿಸಿದ ಶೋಭಾಗೆ ಉತ್ತರದಿಂದ ಟಿಕೆಟ್​ ಕೊಡಲಿಲ್ವಾ..? ಪ್ರತಾಪ್​ ಸಿಂಹ, ಸಿ.ಟಿ ರವಿ, ಡಿವಿಎಸ್​ಗೆ ಮಾತ್ರ ಟಿಕೆಟ್​ ತಪ್ಪಿಸಿದ್ದೇಕೆ..? ಎಂದು ಬಿಎಸ್​ವೈ ವಿರುದ್ಧ ಕಿಡಿ ಕಾರಿದ್ದಾರೆ.

ಇದೇ ವೇಳೆ ಮಾತನಾಡಿ, ರಾಜ್ಯ ಬಿಜೆಪಿಯಲ್ಲಿ ಯಾರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪದಾಧಿಕಾರಿಗಳ ಆಯ್ಕೆ ನಡೆದಿಲ್ಲ. ಬಿಎಸ್ ಯಡಿಯೂರಪ್ಪ ನನ್ನ ಮಗನಿಗೆ ಹಾವೇರಿ ಟಿಕೆಟ್ ಕೊಡಿಸುತ್ತೇನೆ ಪ್ರವಾಸ ಮಾಡಿ ಗೆಲ್ಲಿಸುತ್ತೇನೆ ಎಂದಿದ್ದರು. ಟಿಕೆಟ್ ಘೋಷಣೆಗೂ ಮುನ್ನ ರಾಘವೇಂದ್ರ ಅವರು ಕಾಂತೇಶ್ ಅವರಿಗೆ ಫೋನ್ ಮಾಡಿ ದೇವರಾಣೆಗೂ ನಿನಗೆ ಟಿಕೆಟ್ ಸಿಗುತ್ತೆ ಎಂದಿದ್ದರು. ಯಡಿಯೂರಪ್ಪ ನನ್ನ ಮೊಬೈಲ್ ಗೆ ಕರೆ ಮಾಡಿ, ದೆಹಲಿಗೆ ಹೋಗೋಣ ಬಾ ಎಂದರು. ನಾನು ಬರಲ್ಲ ಶೋಭಾನ ಕರೆದುಕೊಂಡು ಹೋಗಿ ಎಂದಿದ್ದೆ. ಕೇಂದ್ರ ಚುನಾವಣಾ ಸಮಾಚಾರ ಒಂದು ಕುಟುಂಬಕ್ಕೆ ಒಂದು ಟಿಕೆಟ್ ಎಂದು ಹೇಳಿದ್ದರು. ಈಗ ನೀರಿಗಿಳಿದ ಮೇಲೆ ಮಳೆಯೇನು? ಚಳಿಯೇನು? ನೇರವಾಗಿ ತೊಡೆ ತಟ್ಟಿದ್ದೇನೆ ಎಂದು ಆಕ್ರೋಶ ಹೊರ ಹಾಕಿದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ನನ್ನ ನಿರೀಕ್ಷೆಗೂ ಮೀರಿ ಬೆಂಬಲ ಸಿಗುತ್ತಿದೆ. ಬಿಜೆಪಿ ನಿಮ್ಮ ನೋವಿಗೆ ಸ್ಪಂದಿಸುತ್ತಿಲ್ಲ. ಕಾಯಕರ್ತರ ನೋವಿಗೆ ಸ್ಪಂದಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ  ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಬೆಂಬಲವೂ ಸಿಗುತ್ತಿದೆ. ಬಂಡಾಯ ಸ್ಪರ್ಧೆ ಮಾಡಿ ಗೆದ್ದು ಪ್ರಧಾನಿ ಮೋದಿಗೆ ಬೆಂಬಲ ವ್ಯಕ್ತಪಡಿಸುತ್ತೇನೆ. ಲೋಕಸಭೆ ಚುನಾವಣೆ ಮುಗಿದ ಬಳಿಕ ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗುತ್ತದೆ ಎಂದು ಕೆ.ಎಸ್​ ಈಶ್ವರಪ್ಪ ಕೆಂಡ ಕಾರಿದ್ದಾರೆ.

ಇದನ್ನೂ ಓದಿ : ವಿಜಯಪುರದಲ್ಲಿ ‘ಉಡಾಳ’ ಸಿನಿಮಾದ ಮೊದಲ ಹಂತದ ಚಿತ್ರೀಕರಣ ಪೂರ್ಣ..!

Leave a Comment

DG Ad

RELATED LATEST NEWS

Top Headlines

ರಮೇಶ್ ರೆಡ್ಡಿ ನಿರ್ಮಾಣದ “ಘುಸ್ಪೈಥಿಯಾ” ಚಿತ್ರ ಆ.9ರಂದು ತೆರೆಗೆ..!

ನಿರ್ಮಾಪಕ ರಮೇಶ್ ರೆಡ್ಡಿ ಅವರು ಕನ್ನಡ ಚಿತ್ರರಂಗದಲ್ಲಿ ‘ಉಪ್ಪು ಹುಳಿ ಖಾರ’, ‘ನಾತಿಚರಾಮಿ’, ‘ಪಡ್ಡೆಹುಲಿ’, ‘100’, ‘ಗಾಳಿಪಟ 2’ ಚಿತ್ರಗಳನ್ನು ನಿರ್ಮಿಸಿದ್ದಾರೆ. ಪ್ರಸ್ತುತ ಬಹು ನಿರೀಕ್ಷಿತ “45”

Live Cricket

Add Your Heading Text Here