ದೆಹಲಿ : ಲೋಕಸಭಾ ಚುನಾವಣೆಗೆ ತಯಾರಿಗಳು ನಡೆಯುತ್ತಿದೆ. ಈ ಹಿನ್ನೆಲೆಯಿಂದಾಗಿ ಬಿಜೆಪಿ ಹೈಕಮಾಂಡ್ ಇದೀಗ ರಾಜ್ಯಕ್ಕೆ ಇಬ್ಬರು ಉಸ್ತುವಾರಿಗಳನ್ನು ನೇಮಕ ಮಾಡಿದೆ.
ಈ ಸಂಬಂಧ ಬಿಜೆಪಿ ಹೈಕಮಾಂಡ್ ರಾಜ್ಯಾವಾರು ಉಸ್ತುವಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಕರ್ನಾಟಕಕ್ಕೆ ಡಾ. ರಾಧಾ ಮೋಹನ್ ದಾಸ್ ಅಗರ್ವಾಲ್ ಮತ್ತು ಸಹ ಉಸ್ತುವಾರಿಯಾಗಿ ಸುಧಾಕರ್ ರೆಡ್ಡಿ ಅವರನ್ನ ನೇಮಕ ಮಾಡಿದೆ. ವಿವಿಧ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಚುನಾವಣಾ ಉಸ್ತುವಾರಿಗಳನ್ನು ಜೆ.ಪಿ.ನಡ್ಡಾ ಅವರು ನೇಮಿಸಿ, ಆದೇಶ ಹೊರಡಿಸಿದ್ದಾರೆ.
ಕೇರಳಕ್ಕೆ ಪ್ರಕಾಶ್ ಜಾವ್ಡೇಕರ್, ಪುದುಚೇರಿಗೆ ನಿರ್ಮಲ್ ಕುಮಾರ್ ಸುರಾನ ಚುನಾವಣಾ ಉಸ್ತುವಾರಿಯಾಗಿ ಬಿಜೆಪಿ ಹೈಕಮಾಂಡ್ ನೇಮಿಸಿದೆ.
ಇದನ್ನೂ ಓದಿ : ನನಗೆ ಕೊಟ್ಟ ನಿಗಮದಲ್ಲಿ ತೃಪ್ತಿಯಿಂದ ಜನರ ಕೆಲಸ ಮಾಡುತ್ತೇನೆ : ಶಾಸಕ ಬಂಗಾರಪೇಟೆ ನಾರಾಯಣಸ್ವಾಮಿ..!
Post Views: 583