ಬೆಂಗಳೂರು : ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೃದಯಾಘಾತದಿಂದ ನಿಧನರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕೆಂಪಣ್ಣ (84) ಬೆಂಗಳೂರಿನ ಜ್ಯೋತಿಪುರ ನಿವಾಸದಲ್ಲಿ ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪಣ್ಣ ಮೊನ್ನೆಯಷ್ಟೇ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿ ಮನೆಗೆ ವಾಪಾಸಾಗಿದ್ದರು. ಇಂದು ಬೆಳಗ್ಗೆ 10 ಗಂಟೆಗೆ ಇಹಲೋಕ ತ್ಯಜಿಸಿದ್ದಾರೆ ಎಂದು ಕೆಂಪಣ್ಣ ಆಪ್ತರು, ಕುಟುಂಬದ ಮೂಲಗಳು ತಿಳಿಸಿವೆ.
ಕೆಂಪಣ್ಣ ಅವರು ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ ಬಹಳ ಸುದ್ದಿಯಾಗಿದ್ದರು. ಕೆಂಪಣ್ಣ ಅವರು ಬೊಮ್ಮಾಯಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿದ ಬಳಿಕ 40% ಕಮಿಷನ್ ಆರೋಪ ರಾಜ್ಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು.
ಇದನ್ನೂ ಓದಿ : ಛಿದ್ರ-ಛಿದ್ರವಾಯ್ತಾ ಮುನಿರತ್ನ ಮಹಾ ಸಾಮ್ರಾಜ್ಯ.. ಸಾಲು ಸಾಲು ಕೇಸ್ನಲ್ಲಿ ಮುನಿರತ್ನಗೆ ಜೈಲೇ ಫಿಕ್ಸ್?
Post Views: 924