Download Our App

Follow us

Home » ರಾಜ್ಯ » ರಾಜ್ಯದಲ್ಲಿ ಹುಕ್ಕಾ ನಿಷೇಧಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ..!

ರಾಜ್ಯದಲ್ಲಿ ಹುಕ್ಕಾ ನಿಷೇಧಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ..!

ಬೆಂಗಳೂರು : ರಾಜ್ಯದಲ್ಲಿ ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆ ಮಾಡುವುದು, ಅವುಗಳ ಪರ ಜಾಹೀರಾತು ನೀಡುವುದು, ಸೇವನೆಗೆ ಪ್ರಚೋದನೆ ಹಾಗೂ ಸಂಗ್ರಹಣೆ ಮಾಡುವುದನ್ನು ನಿಷೇಧಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.

ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತಕ್ಷಣದಿಂದಲೇ ನಿಷೇಧ ಮಾಡುವಂತೆ ರಾಜ್ಯ ಸರ್ಕಾರ ಆದೇಶ ನೀಡಿದೆ. ಸಂವಿಧಾನದ 47ನೇ ವಿಧಿಯಲ್ಲಿ ರಾಜ್ಯ ಸರ್ಕಾರಕ್ಕೆ ಲಭ್ಯವಿರುವ ಅಧಿಕಾರವನ್ನು ಬಳಸಿ, ತಂಬಾಕು ಅಥವಾ ನಿಕೋಟಿನ್​ ಒಳಗೊಂಡ ಹುಕ್ಕಾ, ತಂಬಾಕು ರಹಿತ ಮತ್ತು ನಿಕೋಟಿನ್​​ ರಹಿತ ಹುಕ್ಕಾ, ಸ್ವಾದಭರಿತ, ಮೊಲಾಸಿಸ್, ಶಿಶಾ ಒಳಗೊಂಡ ಹುಕ್ಕಾಗಳನ್ನು ನಿಷೇಧಿಸಿ ಈ ಆದೇಶ ಹೊರಡಿಸಲಾಗಿದೆ.

ಹುಕ್ಕಾ ಪರಿಣಾಮಗಳ ಬಗ್ಗೆ ವಿಧಾನಸಭೆಯ ಅರ್ಜಿ ಸಮಿತಿಯ “ಉಪ ಸಮಿತಿ” ಕಳೆದ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಿತ್ತು. ಬಳಿಕ ಸರ್ವಾನುಮತದಿಂದ ಹುಕ್ಕಾ ಬಾರ್ ಕುರಿತು ತೀವ್ರವಾದ ಆತಂಕ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಿಂದಾಗಿ ವಿಧಾನಸಭೆಯ ಅರ್ಜಿ ಸಮಿತಿಯ “ಉಪ ಸಮಿತಿ” ಹುಕ್ಕಾ ನಿಷೇಧಕ್ಕೆ ಆಗ್ರಹಿಸಿತ್ತು. ಇದೀಗ ವಿಧಾನಸಭೆಯ ಅರ್ಜಿ ಸಮಿತಿಯ “ಉಪ ಸಮಿತಿ” ಸಲಹೆ ಮೇರೆಗೆ ಹುಕ್ಕಾ ಬಾರ್ ನಿಷೇಧಕ್ಕೆ ಆದೇಶ ನೀಡಿದ್ದಾರೆ.

ಇದನ್ನೂ ಓದಿ : ಬೆಂಗಳೂರಲ್ಲಿ ಮಟ ಮಟ ಮಧ್ಯಾಹ್ನವೇ ಮನೆಗೆ ನುಗ್ಗಿ 2.250ಗ್ರಾಂ ಚಿನ್ನ ಕದ್ದ ಚಾಲಾಕಿ ಕಳ್ಳ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here