Download Our App

Follow us

Home » ರಾಜ್ಯ » ಡ್ರಗ್ಸ್​ ಹಾವಳಿ ತಡೆಗಟ್ಟಲು ರಾಜ್ಯ ಸರ್ಕಾರ ದಿಟ್ಟ ಹೆಜ್ಜೆ – ಗೃಹ ಸಚಿವರ​​​​ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ..!

ಡ್ರಗ್ಸ್​ ಹಾವಳಿ ತಡೆಗಟ್ಟಲು ರಾಜ್ಯ ಸರ್ಕಾರ ದಿಟ್ಟ ಹೆಜ್ಜೆ – ಗೃಹ ಸಚಿವರ​​​​ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ..!

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡ್ರಗ್ಸ್ ತಡೆಗಟ್ಟಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರ ಟಾಸ್ಕ್​ಫೋರ್ಸ್​​​​ ಸಮಿತಿ ರಚಿಸಿದೆ. 6 ಸಚಿವರನ್ನೊಳಗೊಂಡ ಟಾಸ್ಕ್​ಫೋರ್ಸ್ ಸಮಿತಿ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಟಾಸ್ಕ್​ಫೋರ್ಸ್ ಸಮಿತಿ ಅಧ್ಯಕ್ಷರಾಗಿ ಗೃಹ ಸಚಿವ ಪರಮೇಶ್ವರ್ ಅವರನ್ನು ನೇಮಕ ಮಾಡಲಾಗಿದ್ದು, ಇನ್ನುಳಿದ 5 ಸಚಿವರುಗಳನ್ನು ಸಮಿತಿಯ ಸದಸ್ಯರನ್ನಾಗಿ ನೇಮಿಸಲಾಗಿದೆ. ಈ ಮೂಲಕ ಡ್ರಗ್ಸ್​​ಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.

ಗೃಹ ಸಚಿವ ಪರಮೇಶ್ವರ್ ಅವರನ್ನು ಟಾಸ್ಕ್​ಫೋರ್ಸ್ ಸಮಿತಿ ಅಧ್ಯಕ್ಷರಾನ್ನಾಗಿ ನೇಮಕ ಮಾಡಿದ್ದರೆ, ಸಚಿವರಾದ ಪ್ರಿಯಾಂಕ್ ಖರ್ಗೆ, ಮಧು ಬಂಗಾರಪ್ಪ, ಶರಣಪ್ರಕಾಶ್ ಪಾಟೀಲ್, ಡಾ.ಎಂ.ಸಿ ಸುಧಾಕರ್, ದಿನೇಶ್ ಗುಂಡೂರಾವ್ ಅವರನ್ನು ಸಮಿತಿ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

ಈ ಸಮಿತಿಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ತಿಂಗಳಿಗೊಮ್ಮೆ ಸಭೆ ನಡೆಸಿ ಡ್ರಗ್ಸ್ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಸಿಎಂ ಸಿದ್ದು ಖಡಕ್ ಸೂಚನೆ ನೀಡಿದ್ದಾರೆ. ಮಾದಕ ವಸ್ತುಗಳ ಹಾವಳಿ & ನಿಯಂತ್ರಣದ ಬಗ್ಗೆ ಈ ಸಮಿತಿ ಪೊಲೀಸರಿಗೆ ಸಹಕಾರ ನೀಡಲಿದೆ.

ಇದನ್ನೂ ಓದಿ : ಅತ್ಯಾಚಾರ ಆರೋಪ : ಮಾಜಿ ಮಂತ್ರಿ ಮುನಿರತ್ನ ಸೇರಿ 7 ಮಂದಿ ವಿರುದ್ಧ FIR ದಾಖಲು..!

Leave a Comment

DG Ad

RELATED LATEST NEWS

Top Headlines

ಕಮಲ್ ಹಾಸನ್ ಅಭಿನಯದ ‘ಥಗ್ ಲೈಫ್’ ಚಿತ್ರದ ರಿಲೀಸ್​ ಡೇಟ್​​ ಅನೌನ್ಸ್..!

ಕಮಲ್ ಹಾಸನ್ ಅಭಿನಯದ ಮತ್ತು ಮಣಿರತ್ನಂ ನಿರ್ದೇಶನದ ‘ಥಗ್ ಲೈಫ್’ ಚಿತ್ರ ವಿಶ್ವದಾದ್ಯಂತ 2025ರ ಜೂನ್ 5ರಂದು ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. ಇಂದು ಕಮಲ್ ಹಾಸನ್ ಅವರ ಹುಟ್ಟುಹಬ್ಬದ

Live Cricket

Add Your Heading Text Here