Download Our App

Follow us

Home » ರಾಜಕೀಯ » ಫೆ.7ರಂದು ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರ ಸಮರ..!

ಫೆ.7ರಂದು ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರ ಸಮರ..!

ಬೆಂಗಳೂರು : ರಾಜ್ಯಕ್ಕೆ ಕೇಂದ್ರ ಬಜೆಟ್ ನಿಂದ ಅನ್ಯಾಯವಾಗಿದೆ ಎಂದು ಫೆ.7ರಂದು ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ರಾಜ್ಯ ಕಾಂಗ್ರೆಸ್ ಪ್ರತಿಭಟನೆ ನಡೆಸಲು ಮುಂದಾಗಿದೆ.

ರಾಜ್ಯ ಸರ್ಕಾರ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಿದ್ದು, 136 ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಂಸದರು, ರಾಜ್ಯಸಭಾ ಸದಸ್ಯರ ಸಮೇತ ದೆಹಲಿಗೆ ತೆರಳಿ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಫೆಬ್ರವರಿ 6 ರಂದು ರಾಜ್ಯ ಕಾಂಗ್ರೆಸ್​ನಿಂದ ದೆಹಲಿ ಚಲೋ ಯಾತ್ರೆ ನಡೆಸಲಿದ್ದು, ಫೆಬ್ರವರಿ 7ರಂದು ದೆಹಲಿಯಲ್ಲೇ ಕಾಂಗ್ರೆಸ್​ ನಾಯಕರು ಪ್ರತಿಭಟನೆ ನಡೆಸಲಿದ್ದಾರೆ.

ಸಿಎಂ ಸಿದ್ದರಾಮಯ್ಯ ಹೇಳಿಕೆ – ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕಕ್ಕೆ ಏನನ್ನೂ ನೀಡದೇ ರಾಜ್ಯಕ್ಕೆ ಅನ್ಯಾಯವನ್ನು ಎಸೆಗಲಾಗಿದೆ. ಕರ್ನಾಟಕ ದೇಶದಲ್ಲೇ ಅತಿ ಹೆಚ್ಚು ತೆರಿಗೆ ಕಟ್ಟುವ ಎರಡನೇ ದೊಡ್ಡ ರಾಜ್ಯ ಆಗಿದೆ. ವರ್ಷಕ್ಕೆ 4 ಲಕ್ಷ ಕೋಟಿ ತೆರಿಗೆಯನ್ನು ಕನ್ನಡಿಗರು ಕಟ್ಟುತ್ತಾರೆ. ಆದರೆ ಕೇಂದ್ರದಿಂದ ರಾಜ್ಯಕ್ಕೆ ವಾಪಾಸ್ ಬರುವುದು ಕೇವಲ 50 ಸಾವಿರ ಕೋಟಿ. 15 ನೇ ಹಣಕಾಸು ಆಯೋಗದಲ್ಲೂ ರಾಜ್ಯಕ್ಕೆ ತೀವ್ರ ಅನ್ಯಾಯ ಆಗಿದೆ.

ಈ ಅನ್ಯಾಯವನ್ನು ಪ್ರತಿಭಟಿಸಿ ಫೆ 7 ರಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದೇವೆ. ಇದು ಕರ್ನಾಟಕ ಮತ್ತು ಕನ್ನಡಿಗರ ಹಕ್ಕನ್ನು ಕೇಳಲು, ನಮ್ಮ ಪಾಲನ್ನು ನಮಗೆ ಕೊಡಿ ಎಂದು ಕೇಳಲು ನಡೆಸುತ್ತಿರುವ ಪ್ರತಿಭಟನೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ.

Leave a Comment

DG Ad

RELATED LATEST NEWS

Top Headlines

ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ : ಪುರುಷರ ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕಕ್ಕೆ ಮುತ್ತಿಟ್ಟ ನವದೀಪ್ ಸಿಂಗ್..!

ಪ್ಯಾರಿಸ್ : ಪ್ಯಾರಾಲಿಂಪಿಕ್ಸ್​ನಲ್ಲಿ ಶನಿವಾರ ನಡೆದ ಪುರುಷರ ಜಾವೆಲಿನ್ ಥ್ರೋ ಎಫ್​41 ಸ್ಪರ್ಧೆಯಲ್ಲಿ ಭಾರತದ ಜಾವೆಲಿನ್ ಎಸೆತಗಾರ ನವದೀಪ್ ಸಿಂಗ್ ಚಿನ್ನದ ಪದಕ ಗೆದ್ದಿದ್ದಾರೆ. 47.32 ಮೀಟರ್‌ ದೂರಕ್ಕೆ

Live Cricket

Add Your Heading Text Here