Download Our App

Follow us

Home » ರಾಜ್ಯ » ಐಪಿಎಸ್ ಹೇಮಂತ್ ನಿಂಬಾಳ್ಕರ್ ಗೆ ADGPಯಾಗಿ ಮುಂಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ..!

ಐಪಿಎಸ್ ಹೇಮಂತ್ ನಿಂಬಾಳ್ಕರ್ ಗೆ ADGPಯಾಗಿ ಮುಂಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ..!

ಬೆಂಗಳೂರು : ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಗೆ IGP ದರ್ಜೆಯಿಂದ ADGP ದರ್ಜೆಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸದ್ಯ ವಾರ್ತಾ ಇಲಾಖೆ ಆಯುಕ್ತರಾಗಿರುವ ಹೇಮಂತ್ ನಿಂಬಾಳ್ಕರ್ ಅವರು, ಬಡ್ತಿ ಬಳಿಕವೂ ವಾರ್ತಾ ಇಲಾಖೆ ಆಯುಕ್ತರಾಗಿಯೇ ಮುಂದುವರಿಯಲಿದ್ದಾರೆ.

1998ನೇ ಬ್ಯಾಚಿನ ಕರ್ನಾಟಕ ಕೇಡರ್‌ನ ಐಪಿಎಸ್‌ ಅಧಿಕಾರಿಯಾದ ಹೇಮಂತ್‌ ನಿಂಬಾಳ್ಕರ್‌ ಅವರು 2023ರ ಜೂನ್‌ನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ನೇಮಕಗೊಂಡಿದ್ದರು. ಈ ಹಿಂದೆ ಬೆಳಗಾವಿ ಎಸ್‌ಪಿ, ಬೆಂಗಳೂರಿನ ಜಂಟಿ ಆಯುಕ್ತ (ಸಿಸಿಬಿ), ಹೆಚ್ಚುವರಿ ಆಯುಕ್ತ (ಪೂರ್ವ), ಹೆಚ್ಚುವರಿ ಆಯುಕ್ತ (ಆಡಳಿತ) ಹಾಗೂ ಸಿಐಡಿ ಐಜಿಪಿ ಸೇರಿದಂತೆ ವಿವಿಧ ಹುದ್ದೆಗಳನ್ನು ಹೇಮಂತ್‌ ನಿಂಬಾಳ್ಕರ್‌ ಅವರು ನಿರ್ವಹಿಸಿದ್ದರು.

ಸಿಸಿಬಿಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ್ದ ಹೇಮಂತ್‌ ನಿಂಬಾಳ್ಕರ್‌ ಅವರು ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿದ್ದ ವಿಶ್ವದ ಅತ್ಯುಗ್ರ ಸಂಘಟನೆಯಾದ ಐಸಿಸ್‌ನ ಟ್ವೀಟರ್‌ ಹ್ಯಾಂಡ್ಲರ್‌ ಮೆಹದಿ ಬಿಸ್ವಾಸ್‌ನನ್ನು ಬಂಧಿಸಿದ್ದರು. ಕ್ರಿಕೆಟ್‌ ಬೆಟ್ಟಿಂಗ್‌, ಜೂಜು ಅಡ್ಡೆ ಹಾಗೂ ರಿಯಲ್‌ ಎಸ್ಟೇಟ್‌ ಮಾಫಿಯಾಗಳಿಗೆ ದುಸ್ವಪ್ನವಾಗಿ ಕಾಡಿದ್ದರು. ಪೂರ್ವ ವಿಭಾಗದ ಹೆಚ್ಚುವರಿ ಆಯುಕ್ತರಾಗಿದ್ದಾಗ ಕಮ್ಮನಹಳ್ಳಿಯ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಗಳನ್ನು ಕೆಲವೇ ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಿ ಜೈಲಿಗೆ ಅಟ್ಟಿದ್ದರು.

ಇದನ್ನೂ ಓದಿ : ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ನ್ಯಾ. ಪಿ.ಎಸ್ ದಿನೇಶ್ ಕುಮಾರ್ ಹೆಸರು ಶಿಫಾರಸ್ಸು..!

Leave a Comment

DG Ad

RELATED LATEST NEWS

Top Headlines

ಮಂಗಳೂರಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನದ ಸುವರ್ಣ ಸಂಭ್ರಮ.. ಸಾಧು-ಸಂತರು, ರಾಜಕೀಯ ನಾಯಕರು ಭಾಗಿ..!

ಮಂಗಳೂರು : ಇಂದು ಮಂಗಳೂರು ಗಾಂಧಿನಗರದ ಕಾವೂರಿನ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಮಂಗಳೂರು ಶಾಖೆಯ ಸುವರ್ಣ ಮಹೋತ್ಸವ, ಬಿಜಿಎಸ್ ಪಿಯು ಕಾಲೇಜು ಕಟ್ಟಡ ಉದ್ಘಾಟನೆ, ಹಾಗೂ

Live Cricket

Add Your Heading Text Here