Download Our App

Follow us

Home » ರಾಜ್ಯ » ಜು.15ರಿಂದ ರಾಜ್ಯ ವಿಧಾನಮಂಡಲ ಅಧಿವೇಶನ..!

ಜು.15ರಿಂದ ರಾಜ್ಯ ವಿಧಾನಮಂಡಲ ಅಧಿವೇಶನ..!

ಬೆಂಗಳೂರು : ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನವನ್ನು ಜು.15ರಿಂದ 26ರವರೆಗೆ ಕರೆಯಲು ರಾಜ್ಯಪಾಲರಿಗೆ ರಾಜ್ಯ ಸರ್ಕಾರ ಶಿಫಾರಸ್ಸು ಮಾಡಿದೆ. ಜೂ.20ರಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ಅಧಿವೇಶನದ ದಿನಾಂಕ ಅಂತಿಮಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿವೇಚನೆಗೆ ಬಿಡಲಾಗಿತ್ತು. ಅದರಂತೆ ಸಿದ್ದರಾಮಯ್ಯ ಅವರು ಅಧಿವೇಶನದ ದಿನಾಂಕ ಅಂತಿಮಗೊಳಿಸಿದ್ದು, ಈ ಕುರಿತು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲಾಗಿದೆ.

ಇನ್ನು ಲೋಕಸಭಾ ಚುನಾವಣೆ ಫಲಿತಾಂಶದ ನಂತರ ನಡೆಯುತ್ತಿರುವ ಮೊದಲ ಕಲಾಪ ಇದಾಗಿರುವುದರಿಂದ ಆಡಳಿತ ಪಕ್ಷಗಳ ಲೋಪಗಳನ್ನು ಎತ್ತಿ ಹಿಡಿದು ಸರ್ಕಾರದ ಮೇಲೆ ಮುಗಿಬೀಳಲು ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್​​ ಸಜ್ಜಾಗಿವೆ.

ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ಇಂಧನ, ಹಾಲಿನ ದರ ಏರಿಕೆ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಹಗರಣ, ಮೈಸೂರು ಮುಡಾದಲ್ಲಿನ ಹಗರಣಗಳನ್ನು ಇಟ್ಟುಕೊಂಡು ಅಧಿವೇಶನದಲ್ಲಿ ಸರ್ಕಾರವನ್ನ ಕಟ್ಟಿ ಹಾಕುವ ತಂತ್ರವನ್ನು ಬಿಜೆಪಿ-ಜೆಡಿಎಸ್ ಮಾಡಿವೆ ಎಂದು ಹೇಳಲಾಗುತ್ತಿದೆ. ಈ ಮೂಲಕ ಭಾರೀ ಜಟಾಪಟಿಗೆ ವಿಧಾನಮಂಡಲದ ಉಭಯ ಸದನಗಳು ಸಾಕ್ಷಿಯಾಗಲಿದೆ.

ಇದನ್ನೂ ಓದಿ : ರಿಯಾಲಿಟಿ ಶೋ ಹೆಸರಿನಲ್ಲಿ ವಂಚನೆ : ಪೋಷಕರಿಂದ ಲಕ್ಷಾಂತರ ಹಣ ಪಡೆದ ಕಂಪೆನಿ – ಪ್ರಕರಣ ದಾಖಲು..!

 

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here