ಬೆಂಗಳೂರು : ಇಂದು ಕರ್ನಾಟಕದ ಹಲವೆಡೆ ಮಳೆಯಾಗುವ ಸಾಧ್ಯತೆ ಇದ್ದು, ಮುಂದಿನ 24 ಗಂಟೆಗಳ ಕಾಲ ಭರ್ಜರಿ ಮಳೆ ಬೀಳಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ಮೋಡ ಮಂಜಿನ ವಾತಾವರಣ ಇರಲಿದೆ. ಸಂಜೆ ವೇಳೆಗೆ ನಗರದ ಹಲವೆಡೆ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲೂ ವರುಣನ ಆರ್ಭಟ ಜೋರಾಗಿ ಇರಲಿದೆ ಎಂದು ತಿಳಿಸಿದೆ.
ರಾಜ್ಯದ ಈ ಭಾಗಗಳಲ್ಲಿ ಮಳೆ
ಮೈಸೂರು, ಕೊಡಗು, ಹಾಸನ, ರಾಮನಗರ, ತುಮಕೂರು, ವಿಜಯನಗರ, ಚಿಕ್ಕಬಳ್ಳಾಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ : ಮತ್ತೊಂದು ಸ್ಟಾರ್ ಜೋಡಿಯ ಡಿವೋರ್ಸ್ ಪಕ್ಕಾನಾ – ಇನ್‌ಸ್ಟಾಗ್ರಾಂನಲ್ಲಿ ಅನ್‌ಫಾಲೋ ಮಾಡಿದ ದಂಪತಿ!
Post Views: 264