Download Our App

Follow us

Home » ಅಪರಾಧ » ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ : ಶಾಸಕ ಭರತ್ ಶೆಟ್ಟಿ ವಿರುದ್ಧ FIR..!

ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ : ಶಾಸಕ ಭರತ್ ಶೆಟ್ಟಿ ವಿರುದ್ಧ FIR..!

ಮಂಗಳೂರು : ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ವಿಚಾರವಾಗಿ ಮಂಗಳೂರು ಬಿಜೆಪಿ ಶಾಸಕ ಡಾ. ವೈ. ಭರತ್ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಕಾವೂರಿನಲ್ಲಿ ನಡೆದ ಬಿಜೆಪಿ ಪ್ರತಿಭಟನೆಯಲ್ಲಿ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಅವರು, ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿಗೆ ಪಾರ್ಲಿಮೆಂಟ್ ಒಳಗೆ ಹೋಗಿ ಕೆನ್ನೆಗೆ ಬಾರಿಸಬೇಕಿತ್ತು. ರಾಹುಲ್ ಗಾಂಧಿ ಶಿವನ ಫೋಟೊ ಹಿಡಿದು ಸಂಸತ್​ನಲ್ಲಿ ನಿಂತಿದ್ರು, ಶಿವ ಮೂರನೇ ಕಣ್ಣು ಬಿಟ್ರೆ ಏನಾಗುತ್ತೆ ಅನ್ನೋದು ರಾಹುಲ್​ಗೆ ಗೊತ್ತಿಲ್ಲ ಎಂದು ಹೇಳಿಕೆ ನೀಡಿದ್ದರು.

ಈ ವಿಚಾರವಾಗಿ ಕಾಂಗ್ರೆಸ್ ಕಾರ್ಪೊರೇಟರ್ ಅನಿಲ್ ಕುಮಾರ್ ದೂರು ನೀಡಿದ್ದರು. ದೂರಿನ ಮೇರೆಗೆ ಶಾಸಕ ಭರತ್ ಶೆಟ್ಟಿ ವಿರುದ್ಧ ಕಾವೂರು ಠಾಣೆಯಲ್ಲಿ ಬಿಎನ್ಎಸ್ 353 ಸೆಕ್ಷನ್ ಅಡಿ ಕೇಸು ದಾಖಲಾಗಿದೆ.

ಇದನ್ನೂ ಓದಿ : ಮಾಜಿ ಸಚಿವ ನಾಗೇಂದ್ರ ಆಪ್ತ ಹರೀಶ್​ ಅರೆಸ್ಟ್​..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here