ಮಂಡ್ಯ : ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣದಲ್ಲಿ ಹಿಂದೂ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನಿರೀಕ್ಷಣಾ ಜಾಮಿನು ಸಿಕ್ಕಿದೆ. ಪ್ರಕರಣ ಸಂಬಂಧ ಪ್ರಭಾಕರ್ ಭಟ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ ಶ್ರೀರಂಗಪಟ್ಟಣದ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಇಂದು ಜಾಮೀನು ನೀಡಿ ಆದೇಶ ಹೊರಡಿಸಿದೆ. ಸ್ಥಳೀಯ ಇಬ್ಬರು ಶ್ಯೂರಿಟಿ ಸೇರಿ 2 ಲಕ್ಷ ರೂ ಮೌಲ್ಯದ ಬಾಂಡ್ ನೀಡುವಂತೆ ಹೇಳಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಪ್ರಕರಣದ ಹಿನ್ನಲೆ : ಡಿಸೆಂಬರ್ 24ರಂದು ಶ್ರೀರಂಗಪಟ್ಟಣದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಮಾತನಾಡಿದ್ದ ಪ್ರಭಾಕರ್ ಭಟ್, ‘ಮುಸ್ಲಿಂ ಮಹಿಳೆಯರಿಗೆ ದಿನಕ್ಕೊಬ್ಬ ಗಂಡಂದಿರು. ಅವರಿಗೆ ಪರ್ಮನೆಂಟ್ ಗಂಡ ಇರಲಿಲ್ಲ. ಅವರಿಗೆ ಪರ್ಮನೆಂಟ್ ಗಂಡನನ್ನು ಕೊಟ್ಟಿದ್ದೇ ಮೋದಿ ಸರ್ಕಾರ’ ಎಂದು ಭಟ್ ಹೇಳಿದ್ದರು. ಇನ್ನು ಇದಕ್ಕೆ ಮುಸ್ಲಿಂ ಸಮುದಾಯ ಆಕ್ರೋಶ ವ್ಯಕ್ತಪಡಿಸಿತ್ತು.
ಅಲ್ಲದೇ ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದುರಂದಿ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕೆಂದು ಆಗ್ರಹಗಳು ವ್ಯಕ್ತವಾಗಿದ್ದವು. ಇನ್ನು ಈ ಬಗ್ಗೆ ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಝೀರ್ ಚಿಕ್ಕನೇರಳೆ ದೂರು ನೀಡಿದ್ದರು. ದೂರಿನ ಮೇರೆಗೆ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಭಾಕರ್ ಭಟ್ ವಿರುದ್ಧ IPC ಸೆಕ್ಷನ್ 354, 294, 509, 506, 153A, 295 295A, 298ರ ಅಡಿ ಎಫ್‌ಐಆರ್ ದಾಖಲಾಗಿತ್ತು. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಶ್ರೀರಂಗಪಟ್ಟಣದ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಇದನ್ನೂ ಓದಿ : ರಾಜ್ಯದಲ್ಲಿ IAS, KAS ಸೇರಿದಂತೆ ಕೋಚಿಂಗ್ ಸೆಂಟರ್‌ಗಳಿಗೆ ಶಿಕ್ಷಣ ಇಲಾಖೆಯಡಿ ನೋಂದಣಿ ಕಡ್ಡಾಯ – ರಾಜ್ಯ ಸರ್ಕಾರ ಆದೇಶ..!