ಬೆಂಗಳೂರು : ಇಂದಿನಿಂದ ರಾಜ್ಯಾದ್ಯಂತ ಸಿಇಟಿ ಎಕ್ಸಾಂ ಪ್ರಾರಂಭವಾಗಲಿದೆ. ಇಂದು ಮತ್ತು ನಾಳೆ 2 ದಿನ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯಲ್ಲಿ ಯಾವುದೇ ಅಕ್ರಮಕ್ಕೆ ಅವಕಾಶ ಇಲ್ಲ. ಬೆಂಗಳೂರಿನ 167 ಪರೀಕ್ಷಾ ಕೇಂದ್ರದಲ್ಲಿ ಎಕ್ಸಾಂ ನಡೆಯಲಿದ್ದು, ಈ ಬಾರಿ 648 ವಿಶೇಷ ಚೇತನರು CET ಪರೀಕ್ಷೆ ಬರೆಯಲಿದ್ದಾರೆ.
CET ಪರೀಕ್ಷೆಗೆ 20,300 ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಕಳೆದ ವರ್ಷಕ್ಕಿಂತ ಈ ಬಾರಿ ಒಂದು ಲಕ್ಷದಷ್ಟು ಹೆಚ್ಚು ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಇಂದು ಜೀವಶಾಸ್ತ್ರ ಮತ್ತು ಗಣಿತ ಹಾಗೂ ನಾಳೆ ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿವೆ. ಬೆಳಗ್ಗೆ 10.30ಕ್ಕೆ ಮತ್ತು ಮಧ್ಯಾಹ್ನ 2.30ಕ್ಕೆ ಆರಂಭವಾಗುವ ಪರೀಕ್ಷೆಗಳಿಗೆ ಅಭ್ಯರ್ಥಿಗಳು ಸಾಕಷ್ಟು ಮುಂಚಿತವಾಗಿಯೇ ಹಾಜರಿರಬೇಕು. ಬೆಳಗ್ಗೆ 10.40 ಮತ್ತು ಮಧ್ಯಾಹ್ನ 2.40ಕ್ಕೆ ಮೂರನೇ ಬಾರಿಗೆ ಬೆಲ್ ಬಾರಿಸಿದ ಬಳಿಕ ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಇರುವುದಿಲ್ಲ.
ಪರೀಕ್ಷೆಯಲ್ಲಿ ಯಾವುದೇ ಅಕ್ರಮಕ್ಕೆ ಅವಕಾಶವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಗಾವಲು ಕೂಡ ಇರಲಿದೆ. ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಬಿಗಿಭದ್ರತೆಯ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ.
ವಿದ್ಯಾರ್ಥಿಗಳಿಗೆ ಕಡ್ಡಾಯ ಮಾರ್ಗಸೂಚಿ :
- ಪ್ರವೇಶಪತ್ರ ಮತ್ತು ಗುರುತಿನ
- ಪತ್ರದೊಂದಿಗೆ ಬರುವುದು ಕಡ್ಡಾಯ
- ನೀಲಿ ಅಥವಾ ಕಪ್ಪು ಬಣ್ಣದ ಪೆನ್ ಮಾತ್ರ ಬಳಸಬೇಕು
- ಫುಲ್ ಶರ್ಟ್ ಧರಿಸಿಕೊಂಡು ಬರುವಂತಿಲ್ಲ
- ಮೊಬೈಲ್, ಬ್ಲೂಟೂತ್, ಕೈಗಡಿಯಾರ, ಕ್ಯಾಲುಕುಲೇಟರ್,
- ನೋಟ್ ಪ್ಯಾಡ್, ಐ-ಪಾಡ್, ಇಯರ್ ಫೋನ್ ಇತ್ಯಾದಿ ತರುವಂತಿಲ್ಲ.
- ಉತ್ತರವನ್ನು ಗುರುತು ಮಾಡಿದ ಬಳಿಕ ಅದನ್ನು ಅಳಿಸಲು ಅವಕಾಶವಿರುವುದಿಲ್ಲ
- OMR ಶೀಟ್ನ ಕೆಳಭಾಗದಲ್ಲಿ ಅಭ್ಯರ್ಥಿಗಳು ಮರೆಯದೆ ಸಹಿ ಹಾಕಬೇಕು
ಇದನ್ನೂ ಓದಿ : ನಾಳೆ 102 ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆ : ಬಹಿರಂಗ ಪ್ರಚಾರಕ್ಕೆ ತೆರೆ..!