Download Our App

Follow us

Home » ಕ್ರೀಡೆ » ಫೈನಲ್​ ಪ್ರವೇಶಿಸಿ ಇತಿಹಾಸ ಬರೆದ ಕುಸ್ತಿಪಟು ವಿನೇಶ್ ಫೋಗಟ್ – ಒಲಿಂಪಿಕ್ಸ್​​ನಲ್ಲಿ​​ ಭಾರತಕ್ಕೆ ಮತ್ತೊಂದು ಪದಕ ಫಿಕ್ಸ್​​..!

ಫೈನಲ್​ ಪ್ರವೇಶಿಸಿ ಇತಿಹಾಸ ಬರೆದ ಕುಸ್ತಿಪಟು ವಿನೇಶ್ ಫೋಗಟ್ – ಒಲಿಂಪಿಕ್ಸ್​​ನಲ್ಲಿ​​ ಭಾರತಕ್ಕೆ ಮತ್ತೊಂದು ಪದಕ ಫಿಕ್ಸ್​​..!

ಪ್ಯಾರಿಸ್ ಒಲಿಂಪಿಕ್ಸ್​​ನಲ್ಲಿ ನಿನ್ನೆ ನಡೆದ ಮಹಿಳೆಯರ 50ಕೆಜಿ ವಿಭಾಗದ ಫ್ರೀ ಸ್ಟೈಲ್ ಕುಸ್ತಿ ಸೆಮಿಫೈನಲ್ ಪಂದ್ಯದಲ್ಲಿ ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಪೋಗಟ್ ಭರ್ಜರಿ ಗೆಲುವು ಸಾಧಿಸಿ ಫೈನಲ್​ಗೆ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ವಿನೇಶ್ ಫೋಗಟ್ ಒಲಿಂಪಿಕ್ ಇತಿಹಾಸದಲ್ಲಿ ಫೈನಲ್‌ ಪ್ರವೇಶಿಸಿದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಪ್ರಿಕ್ವಾರ್ಟರ್ ಫೈನಲ್‌ನಲ್ಲಿ ಹಾಲಿ ಚಾಂಪಿಯನ್ ಹಾಗೂ ವಿಶ್ವ ನಂ.1 ಕುಸ್ತಿಪಟುವಾಗಿದ್ದ ಜಪಾನಿನ ಯ್ಯೂ ಸುಸುಕಿ ವಿರುದ್ದ 3-2 ಅಂತರದಲ್ಲಿ ರೋಚಕ ಗೆಲುವು ಸಾಧಿಸಿದ್ದ ಫೋಗಟ್, ಕ್ವಾರ್ಟರ್‌ ಫೈನಲ್‌ನಲ್ಲಿ ಉಕ್ರೇನ್‌ನ ಮೂರು ಬಾರಿ ಕಾಮನ್‌ವೆಲ್ತ್ ಗೇಮ್ಸ್‌ ಚಿನ್ನದ ಪದಕ ವಿಜೇತೆ ಒಕ್ಸಾನಾ ಲಿವೀಚ್‌ ಎದುರು 7-5 ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಸೆಮೀಸ್‌ಗೆ ಲಗ್ಗೆಯಿಟ್ಟಿದ್ದರು.

ನಿನ್ನೆ (ಆಗಸ್ಟ್​ 06) ರಾತ್ರಿ ನಡೆದ ಮಹಿಳೆಯರ 50ಕೆಜಿ ಕುಸ್ತಿ ಸೆಮಿಫೈನಲ್​ ಪಂದ್ಯದಲ್ಲಿ ಯುಸ್ನಿಲಿಸ್ ಗುಜ್ಮಾನ್ ಅವರನ್ನು 5-0 ಅಂತರದಿಂದ ಮಣಿಸಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಇನ್ನು ವಿನೇಶ್ ಫೋಗಟ್ ಫೈನಲ್​ನಲ್ಲಿ ಚಿನ್ನ ಅಥವಾ ಬೆಳ್ಳಿ ಗೆದ್ದರೂ ಐತಿಹಾಸಿಕ ಪದಕ ಗೆದ್ದ ಸಾಧನೆ ಮಾಡಲಿದ್ದಾರೆ. 50 ಕೆಜಿ ವಿಭಾಗದಲ್ಲಿ ವಿನೇಶ್ ಒಲಿಂಪಿಕ್ಸ್​ ಆಡುತ್ತಿರುವುದು ಇದೇ ಮೊದಲ ಬಾರಿ. ಇದಕ್ಕೂ ಮುನ್ನ ರಿಯೋ ಒಲಿಂಪಿಕ್ಸ್​ನಲ್ಲಿ 48 ಕೆಜಿ, ಟೋಕಿಯೊದಲ್ಲಿ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿದ್ದರು. ಇದು ವಿನೇಶ್​ ಅವರ ಮೂರನೇ ಒಲಿಂಪಿಕ್ಸ್​ ಟೂರ್ನಿಯಾಗಿದೆ.

ಭಾರತಕ್ಕೆ 4ನೇ ಒಲಿಂಪಿಕ್ಸ್ ಪದಕ ಖಚಿತ : ಪ್ಯಾರಿಸ್ ಒಲಿಂಪಿಕ್ಸ್‌ 2024 ರ ಕ್ರೀಡಾಕೂಟದಲ್ಲಿ ಇದುವರೆಗೂ ಭಾರತದ ಶೂಟರ್‌ಗಳು ಮೂರು ಕಂಚಿನ ಪದಕ ಜಯಿಸಿದ್ದರು. ಇದೀಗ ಕುಸ್ತಿ ಮೂಲಕ ಮೊದಲ ಹಾಗೂ ಒಟ್ಟಾರೆ ಭಾರತಕ್ಕೆ 4ನೇ ಪದಕ ಖಚಿತವಾಗಿದೆ.

ಇದನ್ನೂ ಓದಿ : ಗದಗ : ಮಕ್ಕಳ ಕೂದಲು ಕಟ್ ಮಾಡಿದ ಕಂಪ್ಯೂಟರ್ ಶಿಕ್ಷಕನಿಗೆ ಪೋಷಕರಿಂದ ಧರ್ಮದೇಟು..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here