Download Our App

Follow us

Home » ಅಪರಾಧ » ಬಳ್ಳಾರಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ : ಓರ್ವ PSI ಹಾಗು 3 ಮಂದಿ ಪೊಲೀಸ್ ಸಿಬ್ಬಂದಿಗೆ ಗಂಭೀರ ಗಾಯ..!

ಬಳ್ಳಾರಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ : ಓರ್ವ PSI ಹಾಗು 3 ಮಂದಿ ಪೊಲೀಸ್ ಸಿಬ್ಬಂದಿಗೆ ಗಂಭೀರ ಗಾಯ..!

ಬಳ್ಳಾರಿ : ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿರುವ ಘಟನೆ ಬಳ್ಳಾರಿ‌‌‌‌ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೊಳಗಲ್ಲು ಗ್ರಾಮದಲ್ಲಿ ನಡೆದ ಕಲ್ಲು ತೂರಾಟದಲ್ಲಿ ಓರ್ವ PSI ಹಾಗು 3 ಮಂದಿ ಪೊಲೀಸ್ ಸಿಬ್ಬಂದಿಗೆ ಗಂಭೀರ ಗಾಯಗಳಾಗಿದೆ.

ದುಷ್ಕರ್ಮಿಗಳು ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು ಕಲ್ಲು ತೂರಾಟ ನಡೆಸಿದ್ದಾರೆ. ಬಳ್ಳಾರಿ ಜಿಲ್ಲಾ ಪೊಲೀಸರು ಕೂಡಲೇ ಅಲರ್ಟ್ ಆಗಿ, ಕಲ್ಲು ತೂರಾಟ ನಡೆಸಿದ 44 ಜನರು ಪೊಲೀಸರ ವಶಕ್ಕೆ ಪಡೆದಿದ್ದಾರೆ. ಕಲ್ಲು ತೂರಾಟ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದರು. PSI ಸಂತೋಷ್​ಗೆ ಗಂಭೀರ ಪ್ರಮಾಣದ ಗಾಯಗಳಾಗಿದ್ದು, ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬಳ್ಳಾರಿ ಜಿಲ್ಲೆ ಹಿರಿಯ ಪೊಲೀಸ್ ಅಧಿಕಾರಿಗಳ ಭೇಟಿ ನೀಡಿದ್ದಾರೆ.

IGP ಲೋಕೇಶ್ ಕುಮಾರ್, ಬಳ್ಳಾರಿ ಅಡಿಷನಲ್ SP ರವಿಕುಮಾರ್ ತಂಡದಿಂದ ಸ್ಥಳ ಪರಿಶೀಲನೆ ನಡೆದಿದೆ. ದುಷ್ಕರ್ಮಿಗಳು ಕೈಯಲ್ಲಿ ಕಲ್ಲು ಹಿಡಿದು ಓಡಾಡಿದವರ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ಇದೀಗ ಸ್ಥಳಕ್ಕೆ ಹೆಚ್ಚುವರಿ ಪೊಲೀಸರ ನಿಯೋಜಿಸಿ ಭದ್ರತೆ ಮಾಡಿದ್ದಾರೆ.

ಇದನ್ನೂ ಓದಿ  : ಹೊಸಬರ ಎಲ್ಟು ಮುತ್ತಾ ಟೈಟಲ್ ಪೋಸ್ಟರ್ ಔಟ್ : ‘ಎಲ್ಟು ಮುತ್ತಾ’ನಿಗೆ ಜೊತೆಯಾದ ಹೊಂಬಾಳೆಯ ಶೈಲಜಾ ವಿಜಯ್ ಕಿರಗಂದೂರು..!

Leave a Comment

RELATED LATEST NEWS

Top Headlines

ಓವರ್​ ಟೇಕ್​ ಮಾಡುವ ವಿಚಾರಕ್ಕೆ ಜಗಳ : KSRTC ಬಸ್​ ಡ್ರೈವರ್​​ಗೆ ಚಾ*ಕುವಿನಿಂದ ಇರಿದ ಮಿನಿ ಟ್ರಕ್​​ ಡ್ರೈವರ್​​..!

ಬೆಂಗಳೂರು : ವಾಹನವನ್ನು ಓವರ್​ ಟೇಕ್​ ಮಾಡುವ ವಿಚಾರಕ್ಕೆ ಜಗಳ ನಡೆದು KSRTC ಬಸ್​ ಡ್ರೈವರ್​​ಗೆ ಮಿನಿ ಟ್ರಕ್​​ ಡ್ರೈವರ್ ​​ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ

Live Cricket

Add Your Heading Text Here