Download Our App

Follow us

Home » ಮೆಟ್ರೋ » ಬೆಂಗಳೂರಿನಲ್ಲಿ ಡೆಂಘೀ ನಿಯಂತ್ರಣಕ್ಕೆ ಹರಸಾಹಸ : ಮನೆ-ಮನೆ ಸಮೀಕ್ಷೆಗೆ ಮುಂದಾದ BBMP ಕಮಿಷನರ್​​​..!

ಬೆಂಗಳೂರಿನಲ್ಲಿ ಡೆಂಘೀ ನಿಯಂತ್ರಣಕ್ಕೆ ಹರಸಾಹಸ : ಮನೆ-ಮನೆ ಸಮೀಕ್ಷೆಗೆ ಮುಂದಾದ BBMP ಕಮಿಷನರ್​​​..!

ಬೆಂಗಳೂರು : ಈ ಬಾರಿ ನಗರದಲ್ಲಿ 1230 ಡೆಂಘೀ ಕೇಸ್​ ಪತ್ತೆಯಾಗಿದ್ದರಿಂದ ತೀವ್ರ ಆತಂಕ ಸೃಸ್ಟಿಯಾಗಿದೆ. BBMP ವ್ಯಾಪ್ತಿಯಲ್ಲೇ ಅತೀ ಹೆಚ್ಚು ಡೆಂಘೀ ಕೇಸ್​ ಬೆಳಕಿಗೆ ಬಂದಿದ್ದು, ಪಾಲಿಕೆ ಡೆಂಘೀ ನಿಯಂತ್ರಣಕ್ಕೆ ಹರಸಾಹಸ ಪಡುವಂತಾಗಿದೆ. ಈ ಹಿನ್ನೆಲೆ ನಗರದಲ್ಲಿ ಡೆಂಘೀ ಹರಡುವಿಕೆಯನ್ನು ತಡೆಯುವ ಸಲುವಾಗಿ ಮನೆ-ಮನೆ ಸಮೀಕ್ಷೆ ನಡೆಸಿ ನಾಗರಿಕರಲ್ಲಿ ಜಾಗೃತಿ ಮೂಡಿಸಲಾಗುತ್ತದೆ ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಘೀ ಪ್ರಕರಣ ನಿಯಂತ್ರಿಸುವ ಸಂಬಂಧ ಬುಧವಾರ ಪಾಲಿಕೆ ಕೇಂದ್ರ ಕಚೇರಿ ಸಭಾಂಗಣ- 1ರಲ್ಲಿ ನಡೆದ ಸಭೆಯ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಆಯಾ ವಲಯ ವ್ಯಾಪ್ತಿಯಲ್ಲಿ ಆರೋಗ್ಯ ಪರಿವೀಕ್ಷರು, ಆಶಾ ಕಾರ್ಯಕರ್ತೆಯರು, ಎಎನ್​ಎಂಗಳು ಹಾಗೂ ಲಿಂಕ್ ವರ್ಕರ್ಸ್​ಗಳು ಸೇರಿದಂತೆ 1000 ಮನೆಗಳಿಗೊಂದು ಬ್ಲಾಕ್ ಅನ್ನು ರಚಿಸಿಕೊಂಡು ಡೆಂಘೀ ನಿಯಂತ್ರಿಸಲು ಕ್ರಮ ಕೈಗೊಳುತ್ತೇವೆ.

ನಾಗರಿಕರಲ್ಲಿ ಅರಿವು ಮೂಡಿಸುವುದು ಹಾಗೂ ಯಾರಿಗಾದರು ಜ್ವರ ಬಂದಿದ್ದಲ್ಲಿ ಅಂತಹವರಿಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ತೆರಳಿ ಪರೀಕ್ಷೆ ಮಾಡಿಸಕೊಳ್ಳಲು ತಿಳಿಸುವುದು ಸೇರಿದಂತೆ ಸಮಗ್ರವಾಗಿ ಮನೆ-ಮನೆ ಸಮೀಕ್ಷೆ ನಡೆಸಿ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

  • ಡೆಂಘೀ ಪ್ರಕರಣಗಳ ವಿವರ(2024 ಜನವರಿಯಿಂದ ಇದುವರೆಗೆ)

ವಲಯ – ಪ್ರಕರಣ

ಬೊಮ್ಮನಹಳ್ಳಿ: 122
ಪೂರ್ವ: 218
ಮಹದೇವಪುರ: 386
ಆರ್.ಆರ್.ನಗರ: 75
ದಕ್ಷಿಣ: 190
ಪಶ್ಚಿಮ: 141
ಯಲಹಂಕ: 90
ದಾಸರಹಳ್ಳಿ: 08

ಒಟ್ಟು: 1230 ಪ್ರಕರಣ

ಇದನ್ನೂ ಓದಿ : ಚನ್ನಪಟ್ಟಣ ಗೆಲ್ಲಲು ಡಿಸಿಎಂ ಡಿಕೆಶಿ ದೊಡ್ಡ ಗೇಮ್​​ಪ್ಲಾನ್ ​​- ಅಚ್ಚರಿ ಅಭ್ಯರ್ಥಿಯಾಗಿ ಪುತ್ರಿ ಐಶ್ವರ್ಯಾ ಸ್ಪರ್ಧೆ?

 

 

Leave a Comment

DG Ad

RELATED LATEST NEWS

Top Headlines

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ವೇನಲ್ಲಿ ಡಿವೈಡರ್​​ಗೆ ಡಿಕ್ಕಿ ಹೊಡೆದ ಕಾರು – ತಾಯಿ, ಮಗ ಸ್ಥಳದಲ್ಲೇ ಸಾವು..!

ಮಂಡ್ಯ : ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್​ ವೇ ನಲ್ಲಿ ಭೀಕರ ರಸ್ತೆ ಅಪಘಾತಕ್ಕೆ ತಾಯಿ ಮಗ ಬಲಿಯಾಗಿರುವ ಘಟನೆ ನಡೆದಿದೆ. ರುದ್ರಾಕ್ಷಿಪುರ ಗ್ರಾಮದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಕಾರಿನಲ್ಲಿ

Live Cricket

Add Your Heading Text Here